ಕರ್ನಾಟಕ

karnataka

ETV Bharat / state

ಮಳೆ ಹಾನಿ ಪ್ರದೇಶಗಳ ಪರಿಶೀಲನೆ: ಇಂದು ಉತ್ತರ ಕನ್ನಡ, ಹಾವೇರಿ ಜಿಲ್ಲೆಗಳಿಗೆ ಸಿಎಂ ಭೇಟಿ - :ಮುಖ್ಯಮಂತ್ರಿ ಯಡಿಯೂರಪ್ಪ

ಇಂದು ಉತ್ತರ ಕನ್ನಡ ಮತ್ತು ಹಾವೇರಿ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಸಿಎಂ ಯಡಿಯೂರಪ್ಪ, ನೆರೆ ಹಾವಳಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಸಿಎಂ ಭೇಟಿ

By

Published : Aug 31, 2019, 6:04 AM IST

ಬೆಂಗಳೂರು :ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಉತ್ತರ ಕನ್ನಡ ಮತ್ತು ಹಾವೇರಿ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ.

ಬೆಳಿಗ್ಗೆ 8 ಗಂಟೆಗೆ ಹೆಲಿಕಾಪ್ಟರ್ ನಲ್ಲಿ ಬೆಂಗಳೂರಿನಿಂದ ಹೊರಡುವ ಮುಖ್ಯಮಂತ್ರಿಗಳು ಶಿವಮೊಗ್ಗ ಮಾರ್ಗವಾಗಿ ಬೆ. 10:30ಕ್ಕೆ ಕಾರವಾರ ತಲುಪಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋಟೆಗಾಳಿ ಮತ್ತು ಕದ್ರಾ ಗ್ರಾಮಗಳ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರವಾರ ಜಿಲ್ಲೆಯ ಶಾಸಕರು, ಸಂಸದರು ಹಾಗು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯನ್ನು ಮುಖ್ಯಮಂತ್ರಿಗಳು ನಡೆಸಲಿದ್ದಾರೆ. ಸಭೆ ಬಳಿಕ ಪತ್ರಿಕಾಗೋಷ್ಟಿಯಲ್ಲಿ ಮಳೆ ಹಾನಿ ಮತ್ತು ಅದರ ಪರಿಹಾರ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಮದ್ಯಾಹ್ನ 1:15ಕ್ಕೆ ಸಿಎಂ ಯಡಿಯೂರಪ್ಪನವರು ಹಾವೇರಿ ಜಿಲ್ಲೆಗೆ ಭೇಟಿ ನೀಡಿ ಮಳೆ ಹಾನಿ ಸ್ಥಳಗಳ ವೀಕ್ಷಣೆ ನಡೆಸಲಿದ್ದಾರೆ. ಸರ್ಕಾರದಿಂದ ಆರಂಭಿಸಲಾಗಿರುವ ಪರಿಹಾರ ಕೇಂದ್ರಗಳಿಗೆ ತೆರಳಿ ನಿರಾಶ್ರಿತರ ಅಹವಾಲುಗಳನ್ನು ಆಲಿಸಲಿದ್ದಾರೆ. ಮಳೆ ನಷ್ಟದ ಬಗ್ಗೆ ಜಿಲ್ಲೆಯ ಶಾಸಕರು, ಸಂಸದರು ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯನ್ನು ಮುಖ್ಯಮಂತ್ರಿಗಳು ನಡೆಸಲಿದ್ದಾರೆ. ಬಳಿಕ ಸಂಜೆ 6 ಗಂಟೆಗೆ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.

ABOUT THE AUTHOR

...view details