ಬೆಂಗಳೂರು:ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಬೀದರ್ ಮತ್ತು ಯಾದಗಿರಿ ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದು, ಅನುಭವ ಮಂಟಪ ನಿರ್ಮಾಣಕ್ಕೆ ಭೂಮಿ ಪೂಜೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಗೆ ಚಾಲನೆ ನೀಡಲಿದ್ದಾರೆ.
ಬೆಳಗ್ಗೆ 9 ಗಂಟೆಗೆ ಹೆಚ್.ಎ.ಎಲ್ ವಿಮಾನನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೀದರ್ಗೆ ಪ್ರಯಾಣ ಬೆಳೆಸಲಿರುವ ಸಿಎಂ, 10.15 ಕ್ಕೆ ಬೀದರ್ ತಲುಪಲಿದ್ದಾರೆ. 10:30 ಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿರುವ 100 ಹಾಸಿಗೆಗಳ ಸೌಲಭ್ಯವುಳ್ಳ ಬೀದರ್ ಜಿಲ್ಲಾ ಆಸ್ಪತ್ರೆ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
11.30 ಬೀದರ್ನಿಂದ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣ ಮಾಡಲಿರುವ ಸಿಎಂ 11.50 ಬಸವಕಲ್ಯಾಣದ ಸರ್ಕಾರಿ ಸ್ಟೇಡಿಯಂ ಹೆಲಿಪ್ಯಾಡ್ನಲ್ಲಿ ಬಂದಿಳಿಯಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನುಭವ ಮಂಟಪ ನಿರ್ಮಾಣಕ್ಕೆ ಭೂಮಿಪೂಜೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗು ಶಿಲಾನ್ಯಾಸ ನೆರವೇರಿಸಿ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ಬಸವಕಲ್ಯಾಣದ ಸರ್ಕಾರಿ ಸ್ಟೇಡಿಯಂ ಹೆಲಿಪ್ಯಾಡ್ನಿಂದ ಹೆಲಿಕ್ಯಾಪ್ಟರ್ ಮೂಲಕ ಪ್ರಯಾಣಿಸಿ 2.45 ಕ್ಕೆ ಯಾದಗಿರಿ ಜಿಲ್ಲಾ ಕ್ರೀಡಾಂಗಣ ತಲುಪಲಿದ್ದಾರೆ. ಯಾದಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಮತ್ತು ಇತರ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಸಂಜೆ 5 ಗಂಟೆಗೆ ಯಾದಗಿರಿ ಜಿಲ್ಲಾ ಕ್ರೀಡಾಂಗಣದ ಹೆಲಿಪ್ಯಾಡ್ ಮೂಲಕ ಹೆಲಿಕಾಪ್ಟರ್ನಲ್ಲಿ ಪ್ರಯಾಣ ಬೆಳೆಸಲಿರುವ ಸಿಎಂ ಸಂಜೆ 5.45 ಕ್ಕೆ ಬೀದರ್ ತಲುಪಲಿದ್ದಾರೆ. 6 ಗಂಟೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ವಾಪಸ್ಸಾಗಲಿದ್ದು, ಸಂಜೆ 7:15 ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣ ತಲುಪಲಿದ್ದಾರೆ.