ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಪ್ರತೀಕಾರ ಧೋರಣೆ ಖಂಡಿಸಿ ಇಂದು ಕಾಂಗ್ರೆಸ್ ಕಾರ್ಯಕರ್ತರು ಸ್ವಾಭಿಮಾನಿ ಸಮಾವೇಶ ನಡೆಯಲಿದೆ.
ಕೈ ಪಡೆಯಿಂದ ಇಂದು ಸ್ವಾಭಿಮಾನಿ ಸಮಾವೇಶ.. ಎಂಟಿಬಿ ವಿರುದ್ಧ ರಣಕಹಳೆ ಮೊಳಗಿಸಲಿರುವ ಕಾಂಗ್ರೆಸ್.. - congress news
ಕಾಂಗ್ರೆಸ್‌ನಿಂದ ಶಾಸಕ ಹಾಗೂ ಸಚಿವನಾಗಿ ಅಧಿಕಾರ ಅನುಭವಿಸಿದ ಎಂಟಿಬಿ ನಾಗರಾಜ್, ಪಕ್ಷಕ್ಕೆ ಹಾಗೂ ಅವರನ್ನು ಗೆಲ್ಲಿಸಿದ ಜನಕ್ಕೆ ದ್ರೋಹ ಮಾಡಿ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಪಕ್ಷದ ವಿಪ್ ಉಲ್ಲಂಘಿಸಿ ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಂಡ ಎಂಟಿಬಿ ಅವರ ವಿರುದ್ಧ ಕಾರ್ಯಕರ್ತರು ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ ಮಾಹಿತಿ ನೀಡಿದ್ದಾರೆ.
ನಗರದ ಕೆಇಬಿ ವೃತ್ತದಿಂದ ಹಳೇ ಬಸ್ ನಿಲ್ದಾಣದವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮುನಿಶಾಮಣ್ಣ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್‌ನಿಂದ ಶಾಸಕ ಹಾಗೂ ಸಚಿವನಾಗಿ ಅಧಿಕಾರ ಅನುಭವಿಸಿದ ಎಂಟಿಬಿ ನಾಗರಾಜ್, ಪಕ್ಷಕ್ಕೆ ಹಾಗೂ ಅವರನ್ನು ಗೆಲ್ಲಿಸಿದ ಜನಕ್ಕೆ ದ್ರೋಹ ಮಾಡಿ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಪಕ್ಷದ ವಿಪ್ ಉಲ್ಲಂಘಿಸಿ ಪಕ್ಷಾಂತರ ಕಾಯ್ದೆಯಡಿ ಅನರ್ಹಗೊಂಡ ಎಂಟಿಬಿ ವಿರುದ್ಧ ಕಾರ್ಯಕರ್ತರಿಂದ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತದೆ ಎಂದರು.
ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ , ಮಾಜಿ ಸಂಸದ ವೀರಪ್ಪ ಮೊಯ್ಲಿ , ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ , ಶಾಸಕರಾದ ಜಿ. ಪರಮೇಶ್ವರ್,ರಮೇಶ್ ಕುಮಾರ್,ಕೃಷ್ಣಬೈರೇಗೌಡ, ರಾಮಲಿಂಗಾರೆಡ್ಡಿ ಹಾಗೂ ರಾಜ್ಯ ಕಾಂಗ್ರೆಸ್ ಮುಖಂಡರು ಭಾಗವಹಿಸಲಿದ್ದಾರೆ ಎಂದರು.