ಬೆಂಗಳೂರು: ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆಗೆ ಇಂದು ಮತದಾನ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.
ಒಟ್ಟು 5,762 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು, ಮೊದಲ ಹಂತದಲ್ಲಿ 2,930 ಗ್ರಾ.ಪಂ.ಗಳಿಗೆ ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 5ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗೂ ಎರಡನೇ ಹಂತದ ಚುನಾವಣೆ 2,832 ಗ್ರಾಮ ಪಂಚಾಯಿತಿಗಳಿಗೆ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ.
ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಸಹಕಾರದೊಂದಿಗೆ ಚುನಾವಣೆ ನಡೆಯಲಿದೆ. ಬೀದರ್ ಜಿಲ್ಲೆ ಹೊರತುಪಡಿಸಿ ಉಳಿದೆಡೆ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸಲಾಗುತ್ತಿದೆ. ಮೊದಲ ಹಂತದ ಚುನಾವಣೆಯಲ್ಲಿ 1,17,383 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.