ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ 243 ವಾರ್ಡ್‌ಗಳಲ್ಲಿನ ಮತದಾರರ ಕರಡು ಪಟ್ಟಿಗೆ ಸಪ್ಟೆಂಬರ್ 2 ರೊಳಗಾಗಿ ಆಕ್ಷೇಪಣೆ ಮತ್ತು ಹಕ್ಕುಗಳನ್ನು ಸಲ್ಲಿಸುವಂತೆ ಅಪರ ಜಿಲ್ಲಾ ಚುನಾವಣಾಧಿಕಾರಿ ಪಾಲಿಕೆ(ಕೇಂದ್ರ) ವಿಶೇಷ ಆಯುಕ್ತ ರಂಗಪ್ಪ ಮನವಿ ಮಾಡಿದ್ದಾರೆ.
ಬಿಬಿಎಂಪಿ ಮತದಾರರ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಇಂದೇ ಕೊನೇ ದಿನ
ಮತದಾರರ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ಮತದಾರರ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ಚುನಾವಣಾ ಆಯೋಗವು ಆಗಸ್ಟ್ 25ರಂದು ಮತದಾರರ ಕರಡುಪಟ್ಟಿ ಬಿಡುಗಡೆ ಮಾಡಿದೆ. ಸಾರ್ವಜನಿಕರ ವೀಕ್ಷಣೆಗೆ ಅನುಕೂಲ ಆಗುವಂತೆ ಬಿಬಿಎಂಪಿ ವೆಬ್‌ಸೈಟ್ bbmp.gov.in ನಲ್ಲಿ ಅಪ್ಲೋಡ್ ಮಾಡಲಾಗಿದೆ. ಎಲ್ಲ ಮತದಾರರ ನೋಂದಣಾಧಿಕಾರಿ ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲೂ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ :ಬಿಬಿಎಂಪಿ ಚುನಾವಣೆ-2022 : ಕರಡು ಮತದಾರರ ಪಟ್ಟಿ ಪ್ರಕಟ