ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿಂದು 8191 ಹೊಸ ಪಾಸಿಟಿವ್ ಕೇಸ್, 87 ಸೋಂಕಿತರು ಕೊರೊನಾಗೆ ಬಲಿ..

ರಾಜ್ಯದಲ್ಲಿ ಸಕ್ರಿಯ 1,13,459 ಇದ್ದು, 919 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಕಳೆದ 7 ದಿನಗಳಲ್ಲಿ 1,18,459 ಜನರು ಹೋಂ ಕ್ವಾರೆಂಟೈನ್ ನಲ್ಲಿದ್ದಾರೆ.

By

Published : Oct 13, 2020, 8:25 PM IST

today-karnataka-corona-case-update-news
ರಾಜ್ಯದಲ್ಲಿಂದು 8191 ಹೊಸ ಪಾಸಿಟಿವ್ ಕೇಸ್, 87 ಸೋಂಕಿತರು ಕೊರೊನಾಗೆ ಬಲಿ..

ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು, ಇಂದು 8191 ಜನರಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 7,26,106 ಕ್ಕೆ ಏರಿಕೆ ಆಗಿದೆ.

ಇನ್ನು 87 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದು, 10,123ಕ್ಕೆ ಸಾವಿನ ಸಂಖ್ಯೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. 10,421 ಜನರು ಡಿಸ್ಜಾರ್ಜ್ ಆಗಿದ್ದು, 6,02,505 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಸಕ್ರಿಯ 1,13,459 ಇದ್ದು, 919 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಕಳೆದ 7 ದಿನಗಳಲ್ಲಿ 1,18,459 ಜನರು ಹೋಂ ಕ್ವಾರೆಂಟೈನ್ ನಲ್ಲಿದ್ದಾರೆ. 1115 ವಿಮಾನ ನಿಲ್ದಾಣದಲ್ಲಿ ತಪಾಸಣೆಗೊಳಪಟ್ಟಿದ್ದಾರೆ. ಕೋವಿಡ್ ಸೋಂಕಿತರ ಪ್ರಕರಣ ಶೇಕಡ 7.7% ನಷ್ಟು ಇದ್ದು ಮೃತ ಪಟ್ಟವರ ಶೇಕಡವಾರು ಪ್ರಮಾಣ 1.06 ರಷ್ಟು ಇದೆ.

ಬೆಂಗಳೂರು ನಗರದಲ್ಲಿ ಇಂದು 3777 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಂಡುಬಂದಿದ್ದು, ಸೋಂಕಿತರ ಒಟ್ಟು ಸಂಖ್ಯೆ 2,88,831 ಕ್ಕೆ ಏರಿಕೆಯಾಗಿದೆ. ಇಂದು 4529 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 2,21,651 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳು ಒಟ್ಟು 63,789 ಕ್ಕೆ ಏರಿಕೆಯಾಗಿದೆ. ಇಂದು 28 ಕೊರೊನಾ ಸೋಂಕಿತರು ಬಲಿಯಾಗಿದ್ದು, ಈವರೆಗೆ 3390 ಮಂದಿ ಮೃತಪಟ್ಟಿದ್ದಾರೆ. ಒಟ್ಟು 346 ಮಂದಿ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸರ್ಕಾರದ ಮುಖ್ಯಕಾರ್ಯದರ್ಶಿಗಳ ಜೊತೆ ಸಭೆ:

ನಗರದಲ್ಲಿ 100 ಕ್ಕೂ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳಿಗೆ ಉಸ್ತುವಾರಿಗಳಾಗಿರುವ ಹಿರಿಯ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳು ನಿಯಮಿತವಾಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಹಾಸಿಗೆ ಲಭ್ಯತೆ ಬಗ್ಗೆ ನಿಗಾ ಇಡಬೇಕೆಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ನೀಡಿದ್ದಾರೆ.

ಜೊತೆಗೆ ಸರ್ಕಾರದಿಂದ ಶಿಫಾರಸ್ಸು ಮಾಡುವ ರೋಗಿಗಳಿಗೆ ಕಡ್ಡಾಯವಾಗಿ ಶೇಕಡಾ.50 ರಷ್ಟು ಹಾಸಿಗೆ ಸಿಗುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದಾರೆ. ಕೋವಿಡ್ ಪಾಸಿಟಿವ್ ರೋಗಿಗಳಿಗೆ ಐಸಿಯು, ಹಾಗೂ ಐಸಿಯುವಿ ಹಾಸಿಗೆಗಳನ್ನು ಹೆಚ್ಚಿಸುವಂತೆ ಆರೋಗ್ಯ ಮತ್ತು ಶಿಕ್ಷಣ ಇಲಾಖೆಗಳಿಗೆ ಕ್ರಮವಹಿಸುವಂತೆ ಇದೇ ಸಂಧರ್ಭದಲ್ಲಿ ಸೂಚಿಸಿದ್ದಾರೆ.

ABOUT THE AUTHOR

...view details