ಬೆಂಗಳೂರು: ರಾಜ್ಯದಲ್ಲಿಂದು 23,050 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ 106 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,43,912 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.45% ರಷ್ಟಿದೆ.
ಇತ್ತ 337 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 39,01,430 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 2,420 ಸಕ್ರಿಯ ಪ್ರಕರಣಗಳಿವೆ. ಸೋಂಕಿಗೆ ನಾಲ್ವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,022 ಏರಿಕೆ ಕಂಡಿದೆ. ಡೆತ್ ರೇಟ್ 3.77% ರಷ್ಟಿದೆ.
ವಿಮಾನ ನಿಲ್ದಾಣದಿಂದ 2,816 ಪ್ರಯಾಣಿಕರು ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ 61 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 17,80,397 ಕ್ಕೆ ಏರಿಕೆ ಆಗಿದೆ. 229 ಮಂದಿ ಡಿಸ್ಚಾರ್ಜ್ ಆಗಿದ್ದು, ಈವರೆಗೆ 17,61,500 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಯಾವುದೇ ಸಾವಿನ ವರದಿಯಾಗಿಲ್ಲ, ಸಾವಿನ ಸಂಖ್ಯೆ 16,942 ರಷ್ಟಿದ್ದು, 1,954 ಸಕ್ರಿಯ ಪ್ರಕರಣಗಳಿವೆ.
ರೂಪಾಂತರಿ ವೈರಸ್ ಅಪಡೇಟ್ಸ್ :
ಅಲ್ಪಾ- 156
ಬೀಟಾ-08