ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿಂದು 129 ಮಂದಿಗೆ ಕೋವಿಡ್ ದೃಢ : ಇಬ್ಬರು ಸೋಂಕಿತರು ಸಾವು - ಇಂದಿನ ಕೋವಿಡ್ ವರದಿ

Karnataka COVID report.. ಇಂದು 129 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 206 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್
ಕೋವಿಡ್

By

Published : Mar 15, 2022, 8:48 PM IST

ಬೆಂಗಳೂರು: ರಾಜ್ಯದಲ್ಲಿಂದು 26,055 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ 129 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,44,041 ಕ್ಕೆ ಏರಿಕೆ ಆಗಿದೆ.‌ ಪಾಸಿಟಿವ್ ದರವೂ 0.49% ರಷ್ಟಿದೆ.

ಇತ್ತ 206 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,01,636 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 2,341 ಸಕ್ರಿಯ ಪ್ರಕರಣಗಳಿವೆ. ಸೋಂಕಿಗೆ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,024 ಏರಿಕೆ ಕಂಡಿದೆ. ಡೆತ್ ರೇಟು 1.55% ರಷ್ಟಿದೆ.

ವಿಮಾನ ನಿಲ್ದಾಣದಿಂದ 2,543 ಪ್ರಯಾಣಿಕರು ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ 101 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 17,80,498 ಕ್ಕೆ ಏರಿಕೆ ಆಗಿದೆ. 131 ಮಂದಿ ಗುಣಮುಖರಾಗಿದ್ದು, ಈವರೆಗೆ 17,61,631 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಒಬ್ಬ ಸೋಂಕಿತ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 16,943ಕ್ಕೆ ಏರಿಕೆಯಾಗಿದೆ. 1,923 ಸಕ್ರಿಯ ಪ್ರಕರಣಗಳಿವೆ.

ರೂಪಾಂತರಿ ವೈರಸ್ ಅಪ್​ಡೇಟ್ಸ್:

ಅಲ್ಪಾ- 156

ಬೀಟಾ-08

ಡೆಲ್ಟಾ ಸಬ್ ಲೈನೇಜ್- 4,619

ಇತರೆ- 286

ಒಮಿಕ್ರಾನ್-2,743

BAI.1.529- 813

BA1- 97

BA2- 1,833

ಒಟ್ಟು- 7,812

ABOUT THE AUTHOR

...view details