ಬೆಂಗಳೂರು : ರಾಜ್ಯದಲ್ಲಿಂದು 41,097 ಜನರಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಅದರಲ್ಲಿ 145 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,44,186 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.35% ರಷ್ಟಿದೆ.
ಇತ್ತ 392 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,02,028 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸದ್ಯ 2092 ಸಕ್ರಿಯ ಪ್ರಕರಣಗಳಿವೆ. ಸೋಂಕಿಗೆ ಇಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 40,026 ಏರಿಕೆ ಕಂಡಿದೆ. ಡೆತ್ ರೇಟ್ 1.38% ರಷ್ಟಿದೆ.
ವಿಮಾನ ನಿಲ್ದಾಣದಿಂದ 2,219 ಪ್ರಯಾಣಿಕರು ಆಗಮಿಸಿದ್ದಾರೆ. ಬೆಂಗಳೂರಿನಲ್ಲಿ 97 ಮಂದಿಗೆ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 17,80,595 ಕ್ಕೆ ಏರಿಕೆ ಆಗಿದೆ. 280 ಮಂದಿ ಗುಣಮುಖರಾಗಿದ್ದು, ಈವರೆಗೆ 17,61,911 ಡಿಸ್ಚಾರ್ಜ್ ಆಗಿದ್ದಾರೆ. ಇಬ್ಬರು ಸೋಂಕಿತರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 16,945 ರಷ್ಟಿದ್ದು, ಸದ್ಯ 1,738 ಸಕ್ರಿಯ ಪ್ರಕರಣಗಳಿವೆ.
ರೂಪಾಂತರಿ ವೈರಸ್ ಅಪ್ಡೇಟ್ಸ್ :
ಅಲ್ಪಾ- 156
ಬೀಟಾ-08