ಬೆಂಗಳೂರು: ರಾಜ್ಯದಲ್ಲಿಂದು 349 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ. ಇಂದು 324 ಮಂದಿ ಗುಣಮುಖರಾಗಿದ್ದು, 5824 ಸಕ್ರಿಯ ಪ್ರಕರಣಗಳಿವೆ.
ಈವರೆಗೆ ಒಟ್ಟು 9,33,421 ಮಂದಿ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 9,51,600ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 12336 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 118 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.