ಬೆಂಗಳೂರು: ಜೂನ್ 1ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದ ಆರೋಪಿಯೊಬ್ಬನಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಮೇಯೊ ಹಾಲ್ ಕೋರ್ಟ್‌ಗಳ ಶನಿವಾರದ ಕಲಾಪಗಳನ್ನು ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.
ಆರೋಪಿಗೆ ಕೊರೊನಾ: ನಾಳೆ ಮೇಯೊ ಹಾಲ್ ಕೋರ್ಟ್ ಕಲಾಪ ರದ್ದು - bangalore news
ಪೊಲೀಸರು ಹಾಜರುಪಡಿಸಿದ್ದ ಆರೋಪಿಗೆ ಕೊರೊನಾ ದೃಢಪಟ್ಟಿದ್ದರಿಂದ ಕೋರ್ಟ್‌ಗಳ ಸಮುಚ್ಚಯ ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಮೇಯೊ ಹಾಲ್ ಕೋರ್ಟ್‌ಗಳ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ರದ್ದುಪಡಿಸಲಾಗಿದೆ.
ಪೊಲೀಸರು ಹಾಜರುಪಡಿಸಿದ್ದ ಆರೋಪಿಗೆ ಕೊರೊನಾ ದೃಢಪಟ್ಟಿದ್ದರಿಂದ ಕೋರ್ಟ್ ಸಮುಚ್ಚಯ ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಮೇಯೊ ಹಾಲ್ ಕೋರ್ಟ್‌ಗಳ ಎಲ್ಲಾ ಕಾರ್ಯ ಚಟುವಟಿಕೆಗಳನ್ನು ರದ್ದುಪಡಿಸಲಾಗಿದೆ. ಈ ಕುರಿತು ಮುಖ್ಯ ನ್ಯಾಯಮೂರ್ತಿ ಆದೇಶದ ಮೇರೆಗೆ ರಿಜಿಸ್ಟ್ರಾರ್ ಜನರಲ್ ರಾಜೇಂದ್ರ ಬದಾಮಿಕರ್ ಸುತ್ತೋಲೆ ಹೊರಡಿಸಿದ್ದು, ಶನಿವಾರ ಯಾರೊಬ್ಬರೂ ಕೋರ್ಟ್ ಆವರಣ ಪ್ರವೇಶಿಸಬಾರದೆಂದು ಸೂಚಿಸಿದ್ದಾರೆ. ಹಾಗೆಯೇ ತುರ್ತು ಪ್ರಕರಣಗಳಿದ್ದಲ್ಲಿ ಪ್ರಧಾನ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಬಹುದೆಂದು ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿಯನ್ನು ಜೀವನ್ ಭೀಮಾ ನಗರ ಠಾಣೆ ಪೊಲೀಸರು ಜೂನ್ 1ರ ಸಂಜೆ ಮೇಯೊ ಹಾಲ್ ಕೋರ್ಟ್ ಸಮುಚ್ಚಯದಲ್ಲಿರುವ 10ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಕೆಲ ಕಾಲ ಅಲ್ಲಿಯೇ ಇದ್ದ ಆರೋಪಿಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು. ಈ ಸಂದರ್ಭದಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ಇದೀಗ ಆರೋಪಿಯ ವೈದ್ಯಕೀಯ ವರದಿ ಲಭ್ಯವಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ.