ಬೆಂಗಳೂರು: ವಿಧಾನಸಭೆಯ ಆರನೇ ಅಧಿವೇಶನದ ಪ್ರಯುಕ್ತ ವಿಧಾನ ಮಂಡಲದಲ್ಲಿ ಚರ್ಚಿಸಬಹುದಾದ ವಿಷಯಗಳ ಕುರಿತಂತೆ ಪರಾಮರ್ಶಿಸಲು ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ವಿಧಾನಸೌಧ ಮೊದಲನೇ ಮಹಡಿಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಸಿಎಲ್ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮತ್ತಿತರ ನಾಯಕರು ಉಪಸ್ಥಿತರಿರಲಿದ್ದಾರೆ.