ಬೆಂಗಳೂರು:ನಾಳೆ ಬೆಳಿಗ್ಗೆ 9ಗಂಟೆಗೆ ವಿಧಾನಸೌಧದ ಮೂರನೇ ಮಹಡಿಯಲ್ಲಿ ಇರುವ ಸಿ.ಎಲ್.ಪಿ. ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಬಿಜೆಪಿ ವಿಶ್ವಾಸಮತ ಹಿನ್ನೆಲೆ; ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ - bjp floor test
ವಿಶ್ವಾಸಮತ ಸಾಬೀತುಪಡಿಸುವ ವೇಳೆ ಬಿಜೆಪಿ ವಿರುದ್ಧ ಮತ ಚಲಾಯಿಸುವಂತೆ ಶಾಸಕರಲ್ಲಿ ಮನವಿ ಮಾಡಿಕೊಳ್ಳುವುದು ಸೇರಿದಂತೆ ಹಲವು ವಿಷಯಗಳ ಕುರಿತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಲಿದೆ.
![ಬಿಜೆಪಿ ವಿಶ್ವಾಸಮತ ಹಿನ್ನೆಲೆ; ಸೋಮವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ](https://etvbharatimages.akamaized.net/etvbharat/prod-images/768-512-3971174-thumbnail-3x2-cong.jpg)
congress
ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸೋಮವಾರ ವಿಶ್ವಾಸಮತ ಸಾಬೀತುಪಡಿಸುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಭೆ ಕರೆದಿದೆ. ಸಿ.ಎಲ್.ಪಿ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಭೆ ನಡೆಯಲಿದೆ.
ಎಲ್ಲರೂ ಸಭೆಯಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಪಕ್ಷದ ವತಿಯಿಂದ ಸೂಚನೆ ನೀಡಲಾಗಿದೆ. ಜೆಡಿಎಸ್ ಮತ್ತು ಕಾಂಗ್ರೆಸ್ನ 17 ಅತೃಪ್ತ ಶಾಸಕರನ್ನು ಸ್ಪೀಕರ್ ರಮೇಶ್ ಕುಮಾರ್ ಅನರ್ಹಗೊಳಿಸಿದ್ದಾರೆ. ಇವರಲ್ಲಿ 13 ಮಂದಿ ಕಾಂಗ್ರೆಸ್ ಶಾಸಕರಿದ್ದಾರೆ. ಸದ್ಯ 79 ಸದಸ್ಯರ ಪೈಕಿ ಕಾಂಗ್ರೆಸ್ ಪ್ರಸ್ತುತ 66 ಮಂದಿಯನ್ನು ಹೊಂದಿದೆ. ಜೆಡಿಎಸ್ ಶಾಸಕರೂ ಕಾಂಗ್ರೆಸ್ಗೆ ಬೆಂಬಲ ನೀಡಲಿದ್ದಾರೆ ಎನ್ನಲಾಗಿದೆ.