ಕರ್ನಾಟಕ

karnataka

ETV Bharat / state

ನಾಳೆ ಕೊರೊನಾ ಟಾಸ್ಕ್ ಫೋರ್ಸ್ ಸಭೆ.. ವೈದ್ಯಕೀಯ ಉಪಕರಣ ಖರೀದಿ ಭ್ರಷ್ಟಾಚಾರವೂ ಚರ್ಚೆ? - Bangalore latest news

ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿರುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ..

Meeting
Meeting

By

Published : Jul 19, 2020, 2:49 PM IST

ಬೆಂಗಳೂರು :ನಾಳೆ ಕೊರೊನಾ ಟಾಸ್ಕ್‌ಫೋರ್ಸ್‌ನ ಮಹತ್ವದ ಸಭೆ ನಡೆಯಲಿದೆ. ಲಾಕ್‌ಡೌನ್ ಮುಂದುವರಿಕೆ ಸೇರಿ ಕೊರೊನಾ ನಿಯಂತ್ರಣ ಸಂಬಂಧ ಮಹತ್ವದ ಚರ್ಚೆ ನಡೆಯಲಿದೆ.

ವಿಧಾನಸೌಧದಲ್ಲಿ ನಡೆಯಲಿರುವ ಟಾಸ್ಕ್‌ಫೋರ್ಸ್ಸ ಭೆಯಲ್ಲಿ ಡಿಸಿಎಂ ಡಾ. ಅಶ್ವತ್ಥ್‌ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಬಿ.ಶ್ರೀರಾಮುಲು,ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್‌ ಭಾಸ್ಕರ್ ಭಾಗಿಯಾಗಲಿದ್ದಾರೆ.

ಬೆಂಗಳೂರು ಲಾಕ್‌ಡೌನ್ ನಂತರದ ಪರಿಸ್ಥಿತಿ ಅವಲೋಕನ ನಡೆಸಲಾಗುತ್ತಿದ್ದು, ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಲಾಕ್‌ಡೌನ್ ಜಾರಿಯಾಗಿದ್ದರೂ ರಾಜಧಾನಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಲಾಕ್‌ಡೌನ್ ಮುಂದುವರೆಸಬೇಕಾ ಎನ್ನುವ ಕುರಿತು ಚರ್ಚೆ ನಡೆಯಲಿದೆ.

ಇನ್ನು, ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಸರ್ಕಾರಕ್ಕೆ ಮುಜುಗರ ಉಂಟು ಮಾಡುತ್ತಿರುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ABOUT THE AUTHOR

...view details