ಬೆಂಗಳೂರು:ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾದ ಕುಣಿಗಲ್ ಶಾಸಕ ಡಾ. ರಂಗನಾಥ್ ಅವರು ನಾಳೆ ಇಬ್ಬರು ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ದಾನ ಮಾಡಲು ನಿರ್ಧರಿಸಿದ್ದಾರೆ.
ನಾಳೆ ಶಾಸಕ ಡಾ.ರಂಗನಾಥ್ ಅವರಿಂದ ಪ್ಲಾಸ್ಮಾ ದಾನ - ಪ್ಲಾಸ್ಮಾ ದಾನ
ನಾಳೆ ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆಯಲ್ಲಿ ಶಾಸಕ ಡಾ. ರಂಗನಾಥ್ ಪ್ಲಾಸ್ಮಾ ದಾನ ಮಾಡಲಿದ್ದಾರೆ.

ನಾಳೆ ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಕಾರ್ಪೊರೇಷನ್ ಕೇಂದ್ರ ಕಚೇರಿ ಹಿಂಭಾಗದಲ್ಲಿರುವ ಎಚ್.ಸಿ.ಜಿ. ಕ್ಯಾನ್ಸರ್ ಆಸ್ಪತ್ರೆಯಲ್ಲಿ ಅವರು ಪ್ಲಾಸ್ಮಾ ದಾನ ಮಾಡುತ್ತಿದ್ದಾರೆ. ಈ ರೀತಿ ಪ್ಲಾಸ್ಮಾ ದಾನ ಮಾಡುತ್ತಿರುವ ದೇಶದ ಮೊದಲ ಶಾಸಕ ಡಾ. ರಂಗನಾಥ್ ಅವರಾಗಿದ್ದಾರೆ. ಕೊರೊನಾ ಸೋಂಕಿನಿಂದ ಗುಣಮುಖರಾದವರ ದೇಹದ ಪ್ಲಾಸ್ಮಾವನ್ನು ಇಬ್ಬರು ಕೊರೊನಾ ಸೋಂಕಿತರಿಗೆ ನೀಡಬಹುದಾಗಿದೆ. ಇದರಿಂದ ಅವರ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ.
ಈ ಮೊದಲು ರಂಗನಾಥ್ ಅವರು ಕುಣಿಗಲ್ ಕ್ಷೇತ್ರದ ಜನರಿಗೆ ಲಕ್ಷಾಂತರ ರುಪಾಯಿ ಮೌಲ್ಯದ ಕೊರೊನಾ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ವಿಟಮಿನ್ ಸಿ, ಡಿ ಮತ್ತು ಝಿಂಕ್ ಮಾತ್ರೆಗಳನ್ನು ಉಚಿತವಾಗಿ ಹಂಚಿದ್ದರು.