ಬೆಂಗಳೂರು : ಪ್ರಧಾನಿಯಾಗಿ ನರೇಂದ್ರ ಮೋದಿ ನಾಳೆ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಮೋದಿ ಜೊತೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ರಾಜ್ಯದ ಸಚಿವ ಸ್ಥಾನದ ಆಕಾಂಕ್ಷಿ ಸಂಸದರುಗಳು ಬಿಜೆಪಿ ವರಿಷ್ಠರ ಫೋನ್ಕಾಲ್ಗಳಿಗಾಗಿ ಕಾಯುತ್ತಿದ್ದಾರೆ.
ಧಾರವಾಡದ ಸಂಸದ ಪ್ರಹ್ಲಾದ್ ಜೋಶಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮಣಿಸಿದ ಡಾ. ಉಮೇಶ್ ಜಾಧವ್, ಶೋಭಾ ಕರಂದ್ಲಾಜೆ, ಬೆಳಗಾವಿ ಸಂಸದ ಸುರೇಶ್ ಅಂಗಡಿ, ಬೆಂಗಳೂರು ಉತ್ತರದ ಸಂಸದ ಡಿ.ವಿ ಸದಾನಂದಗೌಡ , ರಾಜ್ಯದಲ್ಲಿ ಅತೀ ಹೆಚ್ಚು ಮತಗಳ ಅಂತರದಿಂದ ಜಯಗಳಿಸಿರುವ ಅನಂತ್ ಕುಮಾರ್ ಹೆಗಡೆ , ಮಾಜಿ ಪ್ರಧಾನಿ ದೇವೇಗೌಡರನ್ನು ಮಣಿಸಿದ ತುಮಕೂರು ಸಂಸದ ಜಿ.ಎಸ್ ಬಸವರಾಜು ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಗಳಾಗಿದ್ದು, ಮೋದಿ ಸಂಪುಟ ಸೇರುವ ಕಾತರದಲ್ಲಿದ್ದಾರೆ.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಿಂದ ನಿರೀಕ್ಷೆಗೂ ಮೀರಿ ಅತಿ ಹೆಚ್ಚು ಸಂಸದರು ಬಿಜೆಪಿಯಿಂದ ಆಯ್ಕೆಯಾಗಿದ್ದಾರೆ. 25 ಅಭ್ಯರ್ಥಿಗಳು ಚುನಾಯಿತರಾಗಿದ್ದು, ಮೋದಿ ಸಂಪುಟದಲ್ಲಿ ರಾಜ್ಯಕ್ಕೆ ಹೆಚ್ಚಿನ ಸಚಿವ ಸ್ಥಾನದ ಕೋಟಾ ಸಿಗಬಹುದು ಎನ್ನುವ ನಿರೀಕ್ಷೆ ಎಲ್ಲರಲ್ಲೂ ಮೂಡಿದೆ.
ಚುನಾವಣೆಯಲ್ಲಿ ಗೆದ್ದಿರುವ 25 ಸಂಸದರಲ್ಲಿ ಸುಮಾರು 18 ಸಂಸದರು ಸಚಿವ ಸ್ಥಾನದ ಮೇಲೆ ಕಣ್ಣಿಟ್ಟು ಲಾಬಿ ನಡೆಸುತ್ತಿದ್ದಾರೆ. ಪ್ರಾದೇಶಿಕವಾರು, ಜಾತಿವಾರು, ಸಂಘ ಪರಿವಾರದ ಕೋಟಾ ಹೀಗೆ ಹಲವು ದೃಷ್ಟಿಕೋನಗಳಲ್ಲಿ ತಮಗೆ ಸಚಿವ ಸ್ಥಾನ ಸಿಗಬಹುದೆನ್ನುವ ನಂಬಿಕೆಯನ್ನು ಬಿಜೆಪಿ ಸಂಸದರು ಹೊಂದಿದ್ದಾರೆ.
ಹೇಗಿದೆ ಲೆಕ್ಕಾಚಾರ: