ಬೆಂಗಳೂರು: ಸರ್ಕಾರಿ ನಿವಾಸ ಕಾವೇರಿಯಲ್ಲಿ ನಾಳೆ ಕೇವಲ ಪೂಜಾ ಕಾರ್ಯ ನೆರವೇರಿಸಲಿದ್ದು, ಸ್ವಲ್ಪ ದಿನಗಳ ನಂತರ ವಾಸ್ತವ್ಯ ಹೂಡಲಿದ್ದೇನೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾರ್ಚ್ 5 ರಂದು ರಾಜ್ಯ ಬಜೆಟ್ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿಂದು ಬಜೆಟ್ ಪೂರ್ವಭಾವಿ ಸಭೆ ನಡೆಯಿತು. ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿಭವನದಲ್ಲಿ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಿಎಂ, ಬಜೆಟ್ ರೂಪುರೇಷೆ, ಆರ್ಥಿಕ ಪರಿಸ್ಥಿತಿ ಕುರಿತು ಚರ್ಚೆ ನಡೆಸಿದರು.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬಿಎಸ್ವೈ, ನಾಳೆ ಬೆಳಗ್ಗೆ ಕಾವೇರಿ ನಿವಾಸದಲ್ಲಿ ಪೂಜೆ ಇಟ್ಟುಕೊಂಡಿದ್ದೇವೆ. ಪೂಜೆ ಬಳಿಕ ಸಂಜೆ ಅರಮನೆ ಮೈದಾನದಲ್ಲಿ ಜನ್ಮ ದಿನದ ಅಭಿನಂದನಾ ಕಾರ್ಯಕ್ರಮವಿದೆ. ಈ ಸಲ ಪುತ್ರ ವಿಜಯೇಂದ್ರ ಆಸಕ್ತಿ ತಗೆದುಕೊಂಡು ಎಲ್ಲ ಪಕ್ಷದ ಮುಖಂಡರನ್ನೂ ಆಹ್ವಾನಿಸಿದ್ದಾರೆ. ಎಲ್ಲರೂ ಒಟ್ಟಾಗಿ ಸೇರಲು ಇದೊಂದು ಸಂದರ್ಭ. ಆದ್ರೆ, ಹಾರ ತುರಾಯಿ ತಂದರೆ ಅದೇ ಗೊಂದಲವಾಗುತ್ತದೆ. ಹಾಗಾಗಿ ಯಾರೂ ಕೂಡ ಹಾರ ತುರಾಯಿ ತರೋದು ಬೇಡ ಎಂದು ಮನವಿ ಮಾಡಿದರು.
ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಕುರಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಕುರಿತು ಪ್ರತಿಕ್ರಿಯೆ ನೀಡಲು ಸಿಎಂ ನಿರಾಕರಿಸಿ ನಿರ್ಗಮಿಸಿದರು.