ಬೆಂಗಳೂರು:ರಾಜ್ಯದ ಕೆಲ ಜಿಲ್ಲೆಗಳಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಕೊರೊನಾ ಹಾಟ್ ಸ್ಪಾಟ್ ಗಳೆಂದು ಗುರುತಿಸಲಾಗಿರುವ 11 ಜಿಲ್ಲೆಗಳ ಜಿಲ್ಲಾಡಳಿತಗಳೊಂದಿಗೆ ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.
ನಾಳೆ ಮಧ್ಯಾಹ್ನ 3 ಗಂಟೆಯಿಂದ ಸಂಜೆ 5.30 ರವರೆಗೆ ಗೃಹ ಕಚೇರಿ ಕೃಷ್ಣಾದಿಂದ ಬಳ್ಳಾರಿ, ದಕ್ಷಿಣ ಕನ್ನಡ, ಹಾಸನ, ಧಾರವಾಡ, ಬೆಳಗಾವಿ, ಮೈಸೂರು, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ಹಾಗೂ ಬೆಂಗಳೂರು ನಗರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿಗಳೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.