ಬೆಂಗಳೂರು:ನಗರದ ಕೊರೊನಾ ಸೋಂಕಿತರ ಸಂಖ್ಯೆ 115ಕ್ಕೆ ಏರಿಕೆಯಾಗಿದೆ. ಬೊಮ್ಮನಹಳ್ಳಿ ವಲಯದ ಹೊಂಗಸಂದ್ರ ವಾರ್ಡ್ನಲ್ಲಿ ಒಬ್ಬ ವ್ಯಕ್ತಿಯಿಂದಲೇ 23 ಮಂದಿಗೆ ಕೊರೊನಾ ಹರಡಿದೆ. 174 ಮಂದಿಯನ್ನ ಕ್ವಾರಂಟೈನ್ನಲ್ಲಿ ಇಡಲಾಗಿತ್ತು. ಇದರಲ್ಲಿ ಒಟ್ಟು 24 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಇನ್ನು ಪಾದರಾಯನಪುರದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಟಿಪ್ಪುನಗರದಲ್ಲಿ ಆರು ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಪಶ್ಚಿಮ ವಲಯದಲ್ಲಿ ಅತಿ ಹೆಚ್ಚು ಅಂದರೆ ಒಟ್ಟು 35 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.