ಕರ್ನಾಟಕ

karnataka

ETV Bharat / state

ಟಫ್ ರೂಲ್ಸ್ ನಾಳೆಯಿಂದ ಜಾರಿ: ಸರ್ವಪಕ್ಷಗಳ ಸಭೆ ಬಳಿಕ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ - CM Guidelines Release

ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯುವ ಸರ್ವಪಕ್ಷಗಳ ವರ್ಚುವಲ್ ಸಭೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಟಫ್ ರೂಲ್ಸ್ ಬಿಡುಗಡೆ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಸಿಎಂ ಮಾರ್ಗಸೂಚಿ
ಸಿಎಂ ಮಾರ್ಗಸೂಚಿ

By

Published : Apr 20, 2021, 4:50 PM IST

ಬೆಂಗಳೂರು: ಕೋವಿಡ್ ಹೆಚ್ಚಳವಾಗಿರುವ ಹಿನ್ನೆಲೆ ಟಫ್ ರೂಲ್ಸ್ ನಾಳೆಯಿಂದ ಜಾರಿಯಾಗುವ ಸಾಧ್ಯತೆ ಇದ್ದು, ಕಠಿಣ ಮಾರ್ಗಸೂಚಿಗೆ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ.

ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆಯುವ ಸರ್ವಪಕ್ಷಗಳ ವರ್ಚುವಲ್ ಸಭೆ ಬಳಿಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಟಫ್ ರೂಲ್ಸ್ ಬಿಡುಗಡೆ ಮಾಡಲಿದ್ದಾರೆ. ರಾಜಭವನದಿಂದ ರಾಜ್ಯಪಾಲ ವಜುಭಾಯ್​ ವಾಲಾ ಸಭೆಯಲ್ಲಿ ಭಾಗವಹಿಸಿದರೆ, ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದಲೇ ವರ್ಚುವಲ್​ ಮೂಲಕ ಪಾಲ್ಗೊಳ್ಳಲಿದ್ದಾರೆ.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ನಿವಾಸದಿಂದ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಕಚೇರಿಯಿಂದ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹಾಸನದಿಂದ ವರ್ಚುವಲ್ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಇನ್ನು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಮ್ಮ ನಿವಾಸದಿಂದ ಭಾಗವಹಿಸುತ್ತಿದ್ದರೆ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಸಿಎಂ ಗೃಹ ಕಚೇರಿ ಕೃಷ್ಣಾದಿಂದ ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ.

ಇದಕ್ಕೂ ಮುನ್ನ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಹಾಗೂ ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅವರ ಜೊತೆ ಸಮಾಲೋಚನೆ ನಡೆಸಿದ ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ, ಕೋವಿಡ್ ಮಾರ್ಗಸೂಚಿ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆ ಬಳಿಕ ಮುಖ್ಯಮಂತ್ರಿಗಳು ಮಾರ್ಗಸೂಚಿ ಬಿಡುಗಡೆ ಮಾಡಲಿದ್ದಾರೆ ಎಂದು ಸಚಿವ ಅಶೋಕ್ ತಿಳಿಸಿದ್ದಾರೆ.

ಟಫ್ ರೂಲ್ಸ್ ಏನು? :ರಾಜ್ಯಾದ್ಯಂತ ನೈಟ್ ಕರ್ಫ್ಯೂ ವಿಸ್ತರಣೆ, (ರಾತ್ರಿ 10ರ ಬದಲಿಗೆ ರಾತ್ರಿ 9ರಿಂದ ಬೆಳಗ್ಗೆ 6 ಗಂಟೆವರೆಗೆ), 144 ಸೆಕ್ಷನ್ ಕಟ್ಟುನಿಟ್ಟಿನ ಜಾರಿ.

ಮಾರುಕಟ್ಟೆ ಪ್ರದೇಶಗಳಲ್ಲಿ ನಿಯಮ ಕಟ್ಟುನಿಟ್ಟಿನ ಜಾರಿ, ಮಾಲ್, ಸಿನಿಮಾ ಮಂದಿರಗಳಿಗೆ ಹೊಸ ನಿಯಮ ಜಾರಿ ಸಾಧ್ಯತೆ. ವೀಕೆಂಡ್ ಲಾಕ್​ಡೌನ್ ಬಗ್ಗೆ ಸರ್ವಪಕ್ಷಗಳ ಸಭೆಯಲ್ಲಿ ಚರ್ಚೆ.

ABOUT THE AUTHOR

...view details