ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ವಾಹನ ಸವಾರರಿಗೆ ಟ್ರಾಫಿಕ್ ಇಲಾಖೆ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸುತ್ತ ಬಂದಿದ್ದಾರೆ. ಇದೀಗ ಪುಲಕೇಶಿನಗರ ಟ್ರಾಫಿಕ್ ಇನ್ಸ್ಪೆಕ್ಟರ್ ಗಣೇಶ್ ವಾಹನ ಸವಾರರಿಗೆ ಜಾಗೃತಿಯನ್ನು ವಿನೂತನವಾಗಿ ಮೂಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಟ್ರಾಫಿಕ್ ಇನ್ಸ್ಪೆಕ್ಟರ್ ಗಣೇಶ್ ವಾಹನ ಸವಾರರಿಗೆ ಜಾಗೃತಿ ಮೂಡಿಸುವ ಸಲುವಾಗಿ ತಮ್ಮ ಕೈಯಿಂದಲೇ ಹಣ ಹಾಕಿ ರಸ್ತೆ ಸುರಕ್ಷತೆ ಬಗ್ಗೆ ಯಮಧರ್ಮರಾಜನ ಪಾತ್ರಧಾರಿಯಿಂದ ಬೀದಿ ನಾಟಕ ಮಾಡಿಸಿದ್ದಾರೆ.