ಬೆಂಗಳೂರು: ರಾಜಭವನದಲ್ಲಿ ಏಳು ಮಂದಿ ಸಚಿವರ ಪ್ರಮಾಣ ವಚನ ಸಮಾರಂಭದ ಹಿನ್ನೆಲೆ ರಾಜಭವನ ಸುತ್ತಲೂ ಬಿಗಿ ಪೊಲೀಸ್ ಬಂದೋ ಬಸ್ತ್ ನಿಯೋಜಿಸಲಾಗಿದೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭ: ರಾಜಭವನ ಸುತ್ತಮುತ್ತ ಟ್ರಾಫಿಕ್ ಜಾಮ್ - ರಾಜಭವನ ಸುತ್ತಮುತ್ತ ಟ್ರಾಫಿಕ್ ಜಾಮ್
ಇಬ್ಬರು ಡಿಸಿಪಿ ನೇತೃತ್ವದಲ್ಲಿ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ವಾಹನ ದಟ್ಟಣೆ ನಿಯಂತ್ರಿಸಲು ರಾಜಭವನ ಮಾರ್ಗದ ರಸ್ತೆ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ.
ಕೊರೊನಾ ಹಿನ್ನೆಲೆಯಲ್ಲಿ ರಾಜಭವನಕ್ಕೆ ಸಚಿವರ ಬೆಂಬಲಿಗರು ಹಾಗೂ ಅಭಿಮಾನಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಪಾಸ್ ಇದ್ದವರಿಗಷ್ಟೇ ರಾಜಭವನದೊಳಗೆ ಪ್ರವೇಶ ಕಲ್ಪಿಸಲಾಗುತ್ತಿದೆ. ಕೊರೊನಾ ಮಾರ್ಗಸೂಚಿ ಪಾಲಿಸಲು ಬೆಂಬಲಿಗರಿಗೆ ಅವಕಾಶ ನಿರಾಕರಿಸಲಾಗಿದೆ. ಇಬ್ಬರು ಡಿಸಿಪಿ ನೇತೃತ್ವದಲ್ಲಿ ನೂರಾರು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ವಾಹನ ದಟ್ಟಣೆ ನಿಯಂತ್ರಿಸಲು ರಾಜಭವನ ಮಾರ್ಗದ ರಸ್ತೆ ಸಂಚಾರವನ್ನು ಸಂಪೂರ್ಣ ನಿಷೇಧಿಸಲಾಗಿದೆ.
ಇದರಿಂದ ವಿಧಾನಸೌಧ ರಸ್ತೆ, ಇಂಡಿಯನ್ ಎಕ್ಸ್ ಪ್ರೆಸ್ ರಸ್ತೆ ಸೇರಿದಂತೆ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಮಾಡುವುದನ್ನು ಹೊರಗಿನಿಂದಲೇ ನೋಡುವ ಹಾಗೇ ಎಲ್ಇಡಿ ಸ್ಕ್ರೀನ್ ಅಳವಡಿಲಾಗಿದೆ.