ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಚಾಲಕನ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ ನಡೆಸಿರುವ ಪ್ರಕರಣ ಶನಿವಾರ ತಡರಾತ್ರಿ ನಗರದ ಕಾರ್ಪೊರೇಷನ್ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.
ರಾತ್ರಿ 11 ಗಂಟೆ ಸುಮಾರಿಗೆ ಕಾರ್ಪೊರೇಷನ್ ಬಳಿ ಸಾಗರದಿಂದ ತಿರುವಣ್ಣಾಮಲೈಗೆ ಹೋಗುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಡ್ರೈವರ್ ಪ್ರಕಾಶ್, ಟಿಕೆಟ್ ಕಾಯ್ದಿರಿಸಿದ್ದ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಕಾರ್ಪೋರೇಷನ್ ಬಳಿ ಬಸ್ ನಿಲ್ಲಿಸಿದ್ದರು. ಈ ವೇಳೆ ಹಿಂದೆ ಎರಡು ಮೂರು ಬಸ್ಗಳು ಬಂದು ನಿಂತಿವೆ. ಕೂಡಲೇ ಬಸ್ ತೆರವುಗೊಳಿಸುವಂತೆ ಟ್ರಾಫಿಕ್ ಸಿಬ್ಬಂದಿ ಆವಾಜ್ ಹಾಕಿದ್ದಾರೆ. ಆದರೆ ಪ್ರಯಾಣಿಕರನ್ನು ಇನ್ನೂ ಬಸ್ ಹತ್ತದ ಕಾರಣ ನಿಲ್ದಾಣದಿಂದ ಚಾಲಕ ಬಸ್ ತೆಗೆದಿರಲಿಲ್ಲ.