ಬೆಂಗಳೂರು: ಹಾಫ್ ಹೆಲ್ಮೆಟ್ ಹಾಕಿದ್ದ ಬೈಕ್ ಸವಾರನಿಂದ ಟ್ರಾಫಿಕ್ ಕಾನ್ಸ್ಟೇಬಲ್ ಲಂಚ ಪಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸಂಚಾರಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಆರೋಪಿಯನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಹೆಚ್.ಎ.ಎಲ್ ಠಾಣೆಯ ಟ್ರಾಫಿಕ್ ಕಾನ್ಸ್ಟೇಬಲ್ ಪವನ್ ದ್ಯಾಮಣ್ಣ ಎಂಬುವರು ಹಾಫ್ ಹೆಲ್ಮೆಟ್ ಹಾಕಿಕೊಂಡು ಬಂದ ಬೈಕ್ ಸವಾರನಿಂದ 100 ರೂ. ಲಂಚ ಪಡೆದು ಬಿಟ್ಟು ಕಳುಹಿಸಿದ ವಿಡಿಯೋ ವೈರಲ್ ಆಗಿತ್ತು. ಪ್ರಾಥಮಿಕ ತನಿಖೆಯಲ್ಲಿ ಆರೋಪ ನಿಜ ಎಂದು ಕಂಡು ಬಂದಿರುವುದರಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.