ಬೆಂಗಳೂರು: ನಗರ ಸೇರಿದಂತೆ ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿದ್ದ 11 ಎಸಿಪಿ ಹಾಗೂ 37 ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
11 ಎಸಿಪಿ, 37 ಇನ್ಸ್ಪೆಕ್ಟರ್ಗಳ ವರ್ಗಾವಣೆ - Transfer of Inspectors
ಒಂದು ವರ್ಷಕ್ಕಿಂತ ಹೆಚ್ಚು ಒಂದೇ ಕಡೆ ಕೆಲಸ ಮಾಡುತ್ತಿದ್ದ 11 ಎಸಿಪಿ, 37 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯ ಪೊಲೀಸ್ ಇಲಾಖೆ
ಒಂದು ವರ್ಷಕ್ಕಿಂತ ಹೆಚ್ಚಾಗಿ ಒಂದೆ ಕಡೆ ಕೆಲಸ ಮಾಡುತ್ತಿದ್ದ ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆಗೊಳಿಸುವುದು ವರ್ಗಾವಣೆ ನಿಯಮ. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯು ವರ್ಗಾವಣೆಗೊಳಿಸಿದೆ.
ಪೋಸ್ಟಿಂಗ್ ನೀಡಿದ ಸ್ಥಳಕ್ಕೆ ಕೂಡಲೇ ಅಧಿಕಾರ ಸ್ವೀಕರಿಸಿ ಪಾಲನಾ ವರದಿ ಸಲ್ಲಿಸುವಂತೆ ರಾಜ್ಯ ಪೊಲೀಸ್ ಇಲಾಖೆಯ ಆಡ್ಮಿನ್ ಆಗಿರುವ ಡಾ.ಎಂ.ಎ.ಸಲೀಂ ಆದೇಶ ಹೊರಡಿಸಿದ್ದಾರೆ.