ಬೆಂಗಳೂರು: 16 ಹಿರಿಯ ಜಿಲ್ಲಾ ನ್ಯಾಯಾಧೀಶರು ಸೇರಿದಂತೆ ರಾಜ್ಯದ ಜಿಲ್ಲಾ ಹಾಗೂ ತಾಲೂಕು ನ್ಯಾಯಾಲಯಗಳಲ್ಲಿ ನಾನಾ ವೃಂದಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 499 ನ್ಯಾಯಾಧೀಶರನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ಮುಖ್ಯ ನ್ಯಾಯಮೂರ್ತಿ ಆದೇಶದ ಮೇರೆಗೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಟಿ.ಜಿ. ಶಿವಶಂಕರೇಗೌಡ ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದಾರೆ. ನ್ಯಾಯಾಧೀಶರ ವರ್ಗಾವಣೆ ಆದೇಶ ಮೇ. 23ರಿಂದ ಜಾರಿಗೆ ಬರಲಿದೆ.
ಪ್ರತಿ ವರ್ಷ ಹೈಕೋರ್ಟ್‌ಗೆ ಬೇಸಿಗೆ ರಜೆ ಆರಂಭವಾಗುವ ಹೊತ್ತಿನಲ್ಲಿ ಜಿಲ್ಲಾ ಮತ್ತು ತಾಲೂಕು ಕೋರ್ಟ್‌ಗಳಲ್ಲಿ ಕಾರ್ಯನಿರ್ವಹಿಸುವ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತದೆ. ಅದರಂತೆ ಈ ವರ್ಷ ನಾನಾ ಹಂತದಲ್ಲಿ 499 ನ್ಯಾಯಾಂಗ ಅಧಿಕಾರಿಗಳನ್ನು ಅವರ 239 ಹೆಸರಿನ ಮುಂದೆ ಸೂಚಿಸಿರುವ ಸ್ಥಳಗಳಿಗೆ ವರ್ಗಾವಣೆ ಮಾಡಲಾಗಿದೆ.