ಬೆಂಗಳೂರು :ಆಯುಷ್ ಇಲಾಖೆ ಆಯುಕ್ತ ಮಂಜುನಾಥ್ ಸೇರಿದಂತೆ ಒಟ್ಟು 9 ಮಂದಿ ಐಎಎಸ್ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಇಂದು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಆಯುಷ್ಯ ಇಲಾಖೆಯ ಆಯುಕ್ತರಾಗಿದ್ದ ಮಂಜುನಾಥ್ ಅವರನ್ನು ಸರ್ವೇ ಇತ್ಯರ್ಥ ಮತ್ತು ಭೂಮಿ ದಾಖಲೆಗಳ ಆಯುಕ್ತರನ್ನಾಗಿ ವರ್ಗಾಯಿಸಲಾಗಿದೆ.
ಸಣ್ಣ ಮತ್ತು ಮಧ್ಯಮ ಕೈಗಾರಿಕಾ ಇಲಾಖೆಯ ನಿರ್ದೇಶಕರಾಗಿದ್ದ ಶ್ರೀಮತಿ ಸತ್ಯಭಾಮ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಗ್ರಾಮೀಣ ಅಭಿವೃದ್ಧಿ ಇಲಾಖೆಯ ಆಯುಕ್ತರಾಗಿದ್ದ ಶ್ರೀಮತಿ ಶಿಲ್ಪ ನಾಗ ಅವರನ್ನು ಚಾಮರಾಜನಗರ ಜಿಲ್ಲೆಯ ಜಿಲ್ಲಾಧಿಕಾರಿಯನ್ನಾಗಿ ವರ್ಗಾಯಿಸಲಾಗಿದೆ. ಬಾಗಲಕೋಟೆಯ ಜಿಲ್ಲಾ ಪಂಚಾಯತಿ ಸಿಇಓ ಆಗಿದ್ದ ಭೂಬಲನ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯನ್ನಾಗಿ ನೇಮಿಸಲಾಗಿದೆ. ತುಮಕೂರಿನ ನಗರಸಭೆಯ ಆಯುಕ್ತರಾಗಿದ್ದ ದರ್ಶನ ಹೆಚ್ ಅವರನ್ನು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.
ಹುದ್ದೆಯ ನಿರೀಕ್ಷೆಯಲ್ಲಿದ್ದ ಅನುರಾಧ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಓ ಆಗಿ ವರ್ಗಾವಣೆ ಮಾಡಲಾಗಿದೆ. ರಾಜ್ಯದ ನಗರ ಮೂಲಭೂತ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಶ್ರೀಮತಿ ಪದ್ಮ ಬಸವಂತಪ್ಪ ಅವರನ್ನು ಕೋಲಾರ ಜಿಲ್ಲಾ ಪಂಚಾಯತಿಯ ಸಿಇಓ ಆಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಸಿಇಓ ಆಗಿದ್ದ ವರ್ಣಿತ್ ನೇಗಿಯವರನ್ನು ಕೊಡಗು ಜಿಲ್ಲಾ ಪಂಚಾಯಿತಿ ಸಿಇಒ ಆಗಿ ವರ್ಗಾಯಿಸಲಾಗಿದೆ. ಹಂಪಿ ವಿಶ್ವ ಪರಂಪರೆ ನಿರ್ವಹಣೆ ಪ್ರಾಧಿಕಾರದ ಆಯುಕ್ತರಾಗಿದ್ದ ಎನ್ ಎಂ ಅಲಿ ಅಕ್ರಮ್ ಶಾ ಅವರನ್ನು ಹೊಸಪೇಟೆ ವಿಭಾಗದ ಉಪವಿಭಾಗಾಧಿಕಾರಿಯನ್ನಾಗಿ ಟ್ರಾನ್ಸ್ಫರ್ ಮಾಡಲಾಗಿದೆ.