ಬೆಂಗಳೂರು: ಸರ್ಕಾರ 8 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶ ಹೊರಡಿಸಿದೆ. ಅಮ್ಲನ್ ಆದಿತ್ಯ ಬಿಸ್ವಾಸ್ ಅವರನ್ನು ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ರಾಜೇಂದ್ರ ಕೆ. ಅವರನ್ನು ಸಹಕಾರಿ ಸಂಘದ ನಿರ್ದೇಶಕರಾಗಿ ವರ್ಗಾಯಿಸಲಾಗಿದೆ. ಸುಂದರೇಶ್ ಬಾಬುರನ್ನು ಬೆಂಗಳೂರು ಸ್ಮಾರ್ಟ್ ಸಿಟಿ ಲಿ.ಎಂಡಿಯಾಗಿ ವರ್ಗಾವಣೆ ಮಾಡಲಾಗಿದೆ.
ಎಂಟು ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ಸೋಮವಾರ ರಾಜ್ಯ ಸರ್ಕಾರ ಎಂಟು ಜನ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಅಧಿಕಾರಿಗಳ ವರ್ಗಾವಣೆ
ಸುರಲ್ಕರ್ ವಿಕಾಸ್ ಕಿಶೋರ್ ಅವರನ್ನು ಕೆಪಿಎಸ್ಸಿಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಶಿವಾನಂದ ಕಪಾಶಿ ಅವರನ್ನು ದಾವಣಗೆರೆ ಡಿಸಿಯಾಗಿ ವರ್ಗಾಯಿಸಲಾಗಿದೆ. ಹೊನ್ನಮ್ಮರನ್ನು ಗದಗ ಡಿಸಿಯಾಗಿ ವರ್ಗಾವಣೆ ಮಾಡಲಾಗಿದೆ. ಆರ್. ಲತಾರನ್ನು ಬೆಂಗಳೂರು ಗ್ರಾಮಾಂತರ ಡಿಸಿಯಾಗಿ ಟ್ರಾನ್ಸಫರ್ ಮಾಡಲಾಗಿದ್ದರೆ, ಲೋಖಂಡೇ ಸ್ನೇಹಲ್ ಸುಧಾಕರ್ರನ್ನು ಉನ್ನತ ಶಿಕ್ಷಣ ಇಲಾಖೆಯ ಉಪ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ:ಸರ್ಕಾರಿ ನೌಕರರ ಶ್ವಾಸಕೋಶ ಕಸಿ ಶಸ್ತ್ರಚಿಕಿತ್ಸೆ ವೆಚ್ಚ ಮರುಪಾವತಿ ದರ ನಿಗದಿಪಡಿಸಿ ಸರ್ಕಾರದ ಆದೇಶಓದಿ: