ಕರ್ನಾಟಕ

karnataka

ETV Bharat / state

ಅಧಿಕಾರಿಗಳ ಸತತ ವರ್ಗಾವಣೆ: ನ್ಯಾಯಕ್ಕಾಗಿ ಸಿಎಟಿ ಮೊರೆ

ಯಾವುದೇ ಪ್ರಮುಖ ಕಾರಣಗಳಿಲ್ಲದೆ ಸತತ ವರ್ಗಾವಣೆ ಮಾಡುವ ಸರ್ಕಾರದ ನೀತಿಯಿಂದ ಬೇಸತ್ತ ಐಪಿಎಸ್ ಅಧಿಕಾರಿಗಳು ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ(ಸಿಎಟಿ) ಮೊರೆ ಹೋಗಿದ್ದು, ನ್ಯಾಯ ಒದಗಿಸುವಂತೆ ಅರ್ಜಿ ಸಲ್ಲಿಸಿದ್ದಾರೆ.

ಅಧಿಕಾರಿಗಳ ಸತತ ವರ್ಗಾವಣೆ: ನ್ಯಾಯಕ್ಕಾಗಿ ಸಿಎಟಿ ಮೊರೆ

By

Published : Aug 8, 2019, 9:33 AM IST

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಹುದ್ದೆಯಿಂದ ವರ್ಗಾವಣೆಗೊಳಿಸಿದ ಸರ್ಕಾರದ ಆದೇಶ ಪ್ರಶ್ನಿಸಿ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ಕೇಂದ್ರ ಆಡಳಿತಾತ್ಮಕ ನ್ಯಾಯ ಮಂಡಳಿ (ಸಿಎಟಿ)ಗೆ ಅರ್ಜಿ ಸಲ್ಲಿಸಿದ ಬೆನ್ನಲೇ ಮತ್ತೊಬ್ಬ ಐಪಿಎಸ್ ಅಧಿಕಾರಿ ಸಿಎಟಿ‌ ಕದ ತಟ್ಟಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್ಪಿಯಾಗಿದ್ದ ಟಿ.ಪಿ.ಶಿವಕುಮಾರ್ ಜಾಗಕ್ಕೆ ಸಿಐಡಿ ಎಸ್ಪಿಯಾಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಎರಡು ದಿನಗಳ ಹಿಂದೆ ಆದೇಶ ಹೊರಡಿಸಿದೆ.

ನ್ಯಾಯಕ್ಕಾಗಿ ಸಿಎಟಿಗೆ ದೂರು

ಹಿಂದಿನ ದೋಸ್ತಿ ಸರ್ಕಾರದಲ್ಲಿ ಶಿವಕುಮಾರ್ ಅವರನ್ನು ಲೋಕಸಭಾ ಚುನಾವಣೆ ಪ್ರಯುಕ್ತ ವರ್ಗಾವಣೆ ಮಾಡಲಾಗಿತ್ತು. ಚುನಾವಣೆ ಬಳಿಕ ಒಂದೂವರೆ ತಿಂಗಳ ಹಿಂದೆ ಬೇರೊಂದು ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ನೀಡಲಾಗಿತ್ತು. ಈಗ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮತ್ತೆ ವರ್ಗಾವಣೆ ಆದೇಶ ನೀಡಲಾಗಿದೆ.

ಸರ್ಕಾರದ ಸತತ ವರ್ಗಾವಣೆ ನೀತಿಯಿಂದ ಬೇಸತ್ತ ಅಧಿಕಾರಿ, ನ್ಯಾಯ ಒದಗಿಸುವಂತೆ ಸಿಎಟಿಗೆ ಅರ್ಜಿ ಸಲ್ಲಿಸಿದ್ದಾರೆ.

ABOUT THE AUTHOR

...view details