ಕರ್ನಾಟಕ

karnataka

ETV Bharat / state

ಓರ್ವ ಐಎಎಸ್ ಅಧಿಕಾರಿ ವರ್ಗಾವಣೆ.. ಇಬ್ಬರಿಗೆ ಹೆಚ್ಚುವರಿ ಜವಾಬ್ದಾರಿ ನೀಡಿದ ಸರ್ಕಾರ - Transfer of one IAS officer

ಡಾ. ಪ್ರಕಾಶ್ ಸಿ. ಜಿ ಹಾಗೂ ಐಎಎಸ್ ಅಧಿಕಾರಿ ಬಸವರಾಜ ಎ. ಬಿ ಅವರಿಗೆ ಸರ್ಕಾರ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿದೆ.

Vidhana Soudha
ವಿಧಾನಸೌಧ

By

Published : Aug 2, 2023, 8:04 PM IST

ಬೆಂಗಳೂರು: ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು, ಗೃಹಲಕ್ಷ್ಮಿ ಯೋಜನೆ ಒಳಪಡುವ ಮಹಿಳಾ ಮತ್ತು ಮಕ್ಕಳ ಇಲಾಖೆ ಕಾರ್ಯದರ್ಶಿಯನ್ನು ವರ್ಗಾವಣೆ ಮಾಡಲಾಗಿದೆ. ಆ ಜಾಗಕ್ಕೆ ಮೈಸೂರು ಪ್ರಾದೇಶಿಕ ಆಯುಕ್ತ ಡಾ. ಪ್ರಕಾಶ್ ಅವರನ್ನು ನಿಯೋಜನೆ ಮಾಡಲಾಗಿದೆ. ಇವರ ಜೊತೆಗೆ ಇತರ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಹೆಚ್ಚುವರಿ ಇಲಾಖೆಗಳ ಜವಾಬ್ದಾರಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.

ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಡಾ. ಪ್ರಕಾಶ್ ಸಿ. ಜಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಸ್ಥಾನಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಕಾರ್ಯದರ್ಶಿ ಆಗಿದ್ದ ಐಎಎಸ್ ಅಧಿಕಾರಿ ಡಾ ಮಂಜುಳಾ ಎನ್ ಅವರ ಜಾಗಕ್ಕೆ ವರ್ಗಾವಣೆ ಮಾಡಿ ಮೊದಲು ಆದೇಶ ಹೊರಡಿಸಿದ್ದ ಸರ್ಕಾರ ನಂತರ ಮತ್ತೊಂದು ಆದೇಶ ಹೊರಡಿಸಿ ವರ್ಗಾವಣೆಗೊಂಡ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಜವಾಬ್ದಾರಿ ಜೊತೆಗೆ ಹೆಚ್ಚುವರಿಯಾಗಿ ಈ ಹಾಲಿ ಕಾರ್ಯ ನಿರ್ವಹಿಸುತ್ತಿದ್ದ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಸ್ಥಾನವನ್ನೂ ನಿರ್ವಹಿಸುವಂತೆ ಆದೇಶ ಹೊರಡಿಸಿದೆ.

ಸದ್ಯ ಗೃಹಲಕ್ಷ್ಮಿ ಯೋಜನೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಬರಲಿದ್ದು, ಯೋಜನೆ ತಾಂತ್ರಿಕ ಕಾರಣದಿಂದಾಗಿ ನೋಂದಣಿ ವಿಳಂಬ ಇತ್ಯಾದಿ ಸಮಸ್ಯೆಗಳು ಸರ್ಕಾರವನ್ನು ಇರುಸು ಮುರುಸಗೊಳಿಸಿತ್ತು. ಈ ಕಾರಣಕ್ಕಾಗಿಯೂ ಇಲಾಖೆಯ ಕಾರ್ಯದರ್ಶಿ ಸ್ಥಾನದಿಂದ ಡಾ. ಮಂಜುಳಾ ಅವರನ್ನು ವರ್ಗಾವಣೆ ಮಾಡಿರಬಹುದು ಎಂದು ಹೇಳಲಾಗುತ್ತಿದೆ. ಕಂದಾಯ ಇಲಾಖೆಯ ಸಾಮಾಜಿಕ ಭದ್ರತೆ ಮತ್ತು ಪಿಂಚಣಿ ವಿಭಾಗದ ನಿರ್ದೇಶಕರು ಆಗಿರುವ ಐಎಎಸ್ ಅಧಿಕಾರಿ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಕಂದಾಯ ಇಲಾಖೆಯ ಆಯುಕ್ತರ ಜವಾಬ್ದಾರಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಮಾಹಿತಿ ಆಯೋಗದ ಆಯುಕ್ತರಾಗಿರುವ ಐಎಎಸ್ ಅಧಿಕಾರಿ ಬಸವರಾಜ ಎ. ಬಿ ಅವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ವಿದ್ಯುನ್ಮಾನ, ಐಟಿ-ಬಿಟಿ ಇಲಾಖೆಯ ನಿರ್ದೇಶಕ ಜವಾಬ್ದಾರಿ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ:ಐವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ABOUT THE AUTHOR

...view details