ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಕ್ರಮ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದರೆ ಮತ್ತೊಂದೆಡೆ ರಾಜ್ಯ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ. ನೇಮಕಾತಿ ವಿಭಾಗದಿಂದ ರಾಜ್ಯ ಆಂತರಿಕಾ ಭದ್ರತಾ ಪಡೆ (ಐಎಸ್‌ಡಿ) ಎಡಿಜಿಪಿ ಹಾಗೂ ಅಮ್ರಿತ್ ಪಾಲ್ ಅವರ ಜಾಗಕ್ಕೆ ಅಪರಾಧ ಹಾಗೂ ತಾಂತ್ರಿಕ ಸೇವೆ ಎಡಿಜಿಪಿಯಾಗಿರುವ ಆರ್.ಹಿತೇಂದ್ರ ಅವರನ್ನು ನಿಯುಕ್ತಿ ಮಾಡಲಾಗಿದೆ.
ಪಿಎಸ್ಐ ನೇಮಕಾತಿ ಅಕ್ರಮದ ತನಿಖೆ ನಡೆಯುವಾಗಲೇ ನೇಮಕಾತಿ ವಿಭಾಗದ ಎಡಿಜಿಪಿ ವರ್ಗ - ನೇಮಕಾತಿ ವಿಭಾಗದ ಎಡಿಜಿಪಿ ಅಮ್ರಿತ್ ಪಾಲ್ ವರ್ಗಾವಣೆ
ಪಿಎಸ್ಐ ನೇಮಕಾತಿ ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ನೇಮಕಾತಿ ವಿಭಾಗದ ಎಡಿಜಿಪಿಯಾಗಿರುವ ಅಮ್ರಿತ್ ಪಾಲ್ ಅವರನ್ನು ವರ್ಗಾವಣೆ ಮಾಡಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಇದನ್ನೂ ಓದಿ:ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಕೇಸ್: ಹಿರಿಯ ಪ್ರಾಧ್ಯಾಪಕ ಪೊಲೀಸ್ ವಶ
ಪಿಎಸ್ಐ ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ನೇಮಕಾತಿ ವಿಭಾಗದ ಎಡಿಜಿಪಿಯಾಗಿರುವ ಅಮ್ರಿತ್ ಪಾಲ್ ಅವರನ್ನು ವರ್ಗ ಮಾಡಿರುವುದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ನೇಮಕಾತಿ ಅಭ್ಯರ್ಥಿಗಳ ವಿಚಾರಣೆ ಬಳಿಕ ಪೊಲೀಸ್ ನೇಮಕಾತಿ ವಿಭಾಗಕ್ಕೂ ಸಂಕಷ್ಟ ಎದುರಾಗಿತ್ತು. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾದ ಮೇಲ್ವಿಚಾರಕರು, ಪರೀಕ್ಷಾ ಕೇಂದ್ರದ ಸೂಪರ್ವೈಸರ್ಗಳು ಹಾಗೂ ಭದ್ರತೆ ಉಸ್ತುವಾರಿ ವಹಿಸಿಕೊಂಡಿದ್ದ ಎಸಿಪಿಗಳನ್ನೂ ವಿಚಾರಣೆ ನಡೆಸಲು ಸಿಐಡಿ ಸಿದ್ಧತೆ ನಡೆಸಿಕೊಂಡಿತ್ತು. ಇತ್ತೀಚೆಗೆ ಸಿಐಡಿ ಪ್ರಧಾನ ಕಚೇರಿಯಲ್ಲಿರುವ ನೇಮಕಾತಿ ವಿಭಾಗದ ಎಡಿಜಿಪಿ ಕೊಠಡಿಗೂ ತೆರಳಿ ಪರಿಶೀಲನೆ ನಡೆಸಲಾಗಿದೆ.
TAGGED:
ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣ