ಕರ್ನಾಟಕ

karnataka

ETV Bharat / state

ಪಿಎಸ್​ಐ ಪರೀಕ್ಷೆ ಅಕ್ರಮ ಬೆನ್ನಲ್ಲೇ ಪೊಲೀಸ್ ನೇಮಕಾತಿ ವಿಭಾಗದಲ್ಲಿನ 12 ಮಂದಿ ವರ್ಗಾವಣೆ - ಪೊಲೀಸ್ ನೇಮಕಾತಿ ವಿಭಾಗದಲ್ಲಿನ 12 ಮಂದಿ ವರ್ಗಾವಣೆ

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ಬೆನ್ನಲ್ಲೇ ನೇಮಕಾತಿ ವಿಭಾಗದಲ್ಲಿನ 12 ಮಂದಿಯನ್ನು ವರ್ಗಾವಣೆ ಮಾಡಲಾಗಿದೆ.

transfers-of-12-persons-in-police-recruitment-division
ಪೊಲೀಸ್ ನೇಮಕಾತಿ ವಿಭಾಗದಲ್ಲಿನ 12 ಮಂದಿ ವರ್ಗಾವಣೆ

By

Published : May 7, 2022, 5:46 PM IST

Updated : May 7, 2022, 6:10 PM IST

ಬೆಂಗಳೂರು:ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ ಬೆನ್ನಲ್ಲೇ ಪೊಲೀಸ್ ನೇಮಕಾತಿ ವಿಭಾಗದಲ್ಲಿ ಭಾರಿ ಬದಲಾವಣೆಯಾಗಿದೆ. 17 ಅಧಿಕಾರಿಗಳು ಮತ್ತು ಸಿಬ್ಬಂದಿಗಳಲ್ಲಿ 12 ಮಂದಿ ವರ್ಗಾವಣೆ ಮಾಡಿ ನೇಮಕಾತಿ ವಿಭಾಗದ ಎಡಿಜಿಪಿ ಹಿತೇಂದ್ರ ಆದೇಶ ಹೊರಡಿಸಿದ್ದಾರೆ.

ಹಿತೇಂದ್ರ ಎಡಿಜಿಪಿ ಆಗಿ ವರ್ಗಾವಣೆಗೊಂಡ ಬಳಿಕ ಸಾಮೂಹಿಕ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಪಿಎಸ್ಐ ನೇಮಕಾತಿಯಲ್ಲಿ ಅಕ್ರಮದಲ್ಲಿ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿ ಕೈವಾಡವಿರುವ ಶಂಕೆ ಇದ್ದು, ಇಲಾಖೆಗೆ ಕೆಟ್ಟ ಹೆಸರು ಬಂದ ಹಿನ್ನೆಲೆಯಲ್ಲಿ ಹಿತೇಂದ್ರ ಇಂತಹದೊಂದು ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಸದ್ಯ ನೇಮಕಾತಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ 17 ಮಂದಿ ಪೈಕಿ 12 ಜನರನ್ನು ಬೇರೆ ಬೇರೆ ಕಡೆ ವರ್ಗಾವಣೆ ಮಾಡಲಾಗಿದೆ. ಸದ್ಯಕ್ಕೆ ಕಚೇರಿ ಕರ್ತವ್ಯ ನಿರ್ವಹಣೆಗಾಗಿ 5 ಜನರನ್ನು ಉಳಿಸಿಕೊಳ್ಳಲಾಗಿದೆ. ಖಾಲಿ ಇರುವ 12 ಸ್ಥಾನಕ್ಕೆ ಹೊಸಬರು ಬಂದ ಬಳಿಕ ಉಳಿದ ಐವರ ಬದಲಾವಣೆಯಾಗುವ ಸಾಧ್ಯತೆಯಿದೆ. ಒಟ್ಟಾರೆ, ನೇಮಕಾತಿ ವಿಭಾಗಕ್ಕೆ ಹೊಸ ಅಧಿಕಾರಿ ಸಿಬ್ಬಂದಿ ನೇಮಕವಾಗಿದೆ.

ಇದನ್ನೂ ಓದಿ:ಕಾಂಗ್ರೆಸ್​ಗೆ​​ ರಾಜೀನಾಮೆ ನೀಡಿದ ಕಾಂಗ್ರೆಸ್​​ನ ಮಾಜಿ ಶಾಸಕ: ಬಿಜೆಪಿಗೆ ಸೇರ್ಪಡೆ

Last Updated : May 7, 2022, 6:10 PM IST

ABOUT THE AUTHOR

...view details