ಕರ್ನಾಟಕ

karnataka

ETV Bharat / state

ಸಾರಿಗೆ ನಿಗಮ ಪುನಶ್ಚೇತನ.. ಸಿಎಂಗೆ 131 ಪುಟಗಳ ಅಂತಿಮ ವರದಿ ಸಲ್ಲಿಸಿದ ಸಮಿತಿ

ಸಾರಿಗೆ ನಿಗಮ ಪುನಶ್ಚೇತನಕ್ಕೆ ಕ್ರಮ- ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ಎಂ‌ ಆರ್ ಶ್ರೀನಿವಾಸ ಮೂರ್ತಿ- ಸರ್ಕಾರಕ್ಕೆ 131 ಪುಟಗಳ ಅಂತಿಮ ವರದಿ ಸಲ್ಲಿಕೆ

ಸಿಎಂಗೆ 131 ಪುಟಗಳ ಅಂತಿಮ ವರದಿ ಸಲ್ಲಿಸಿದ ಸಾರಿಗೆ ನಿಗಮ ಸಮಿತಿ
ಸಿಎಂಗೆ 131 ಪುಟಗಳ ಅಂತಿಮ ವರದಿ ಸಲ್ಲಿಸಿದ ಸಾರಿಗೆ ನಿಗಮ ಸಮಿತಿ

By

Published : Jul 19, 2022, 5:52 PM IST

ಬೆಂಗಳೂರು: ನಷ್ಟದ ಸುಳಿಯಲ್ಲಿ ಸಿಲುಕಿರುವ ರಾಜ್ಯದ ರಸ್ತೆ ಸಾರಿಗೆ ನಿಗಮಗಳನ್ನು ಪುನಶ್ಚೇತನಗೊಳಿಸುವ ಸಂಬಂಧ ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಂ.ಆರ್. ಶ್ರೀನಿವಾಸ ಮೂರ್ತಿ ನೇತೃತ್ವದ ಏಕ ಸದಸ್ಯ ಸಮಿತಿ ಸರ್ಕಾರಕ್ಕೆ 131 ಪುಟಗಳ ಅಂತಿಮ ವರದಿ ಸಲ್ಲಿಕೆ ಮಾಡಿದೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಭೇಟಿ ಮಾಡಿದ ಎಂ‌ ಆರ್ ಶ್ರೀನಿವಾಸ ಮೂರ್ತಿ ಅವರು, ಸಾರಿಗೆ ವ್ಯವಸ್ಥೆಯ ಸೋರಿಕೆ ತಡೆಗಟ್ಟುವುದು, ಸಂಪನ್ಮೂಲ ಸೃಜನೆಗೆ ಒತ್ತು ನೀಡುವುದು, ಸಂಸ್ಥೆಗಳ ಉತ್ತಮ ಸೇವೆಯ ಮೂಲಕ ಲಾಭದಾಯಕವಾಗಿ ಕಾರ್ಯನಿರ್ವಹಿಸುವುದು, ನಾಲ್ಕೂ ಸಾರಿಗೆ ಸಂಸ್ಥೆಗಳ ಸುಸ್ಥಿರ ಕಾರ್ಯ ನಿರ್ವಹಣೆ ಸೇರಿದಂತೆ ಹಲವು ಶಿಫಾರಸುಗಳನ್ನು ಒಳಗೊಂಡ ಅಂತಿಮ ವರದಿಯನ್ನು ಸಲ್ಲಿಸಿದರು.

ಸಿಎಂಗೆ 131 ಪುಟಗಳ ಅಂತಿಮ ವರದಿ ಸಲ್ಲಿಸಿದ ಸಮಿತಿ

ವರದಿಯ ಕೆಲ ಅಂಶಗಳು :

  • ಸಾರಿಗೆ ನಿಗಮಗಳ ಆರ್ಥಿಕ ನಷ್ಟ ದೂರ ಮಾಡಲು ಹಲವು ಶಿಫಾರಸು
  • ನಾಲ್ಕೂ ಸಾರಿಗೆ ನಿಗಮಗಳಿಗೆ ಮಧ್ಯವರ್ತಿ ಸಂಸ್ಥೆಯಿಂದ ಹಣಕಾಸು ಸಾಲ
  • ನಿಗಮಗಳು ತಮ್ಮ ಆದಾಯದಲ್ಲೇ ಮುಂದುವರೆಯುವಂತೆ ಮಾಡುವ ಬಗ್ಗೆ ಸಲಹೆ
  • ಸದ್ಯ ನಾಲ್ಕೂ ನಿಗಮಗಳ ಬಳಿ 24 ಸಾವಿರ ಬಸ್​​ಗಳಿವೆ
  • 2030 ರ ಹೊತ್ತಿಗೆ ಬಸ್ ಗಳ ಸಂಖ್ಯೆ 40 ಸಾವಿರಕ್ಕೆ ಏರಿಸಲು ಕ್ರಮವಹಿಸಲು ಶಿಫಾರಸು
  • ಬಸ್ ಗಳ ಖರೀದಿಗೆ ಸರ್ಕಾರ ಹಣ ನೀಡದೇ ಮಧ್ಯವರ್ತಿ ಸಂಸ್ಥೆಯಿಂದ ಹಣಕಾಸು ಒದಗಿಸಬೇಕು
  • ಒಂದು ಬಸ್ ಗೆ ಚಾಲಕ ಮಾತ್ರ ಸಾಕು. ಚಾಲಕನೇ ನಿರ್ವಾಹಕನ ಕೆಲಸ ಮಾಡುವಂತಿರಬೇಕು
  • ಬಸ್​​​ಗಳನ್ನು ಸ್ಟಾಪ್ ಟು ಸ್ಟಾಪ್ ಮಾತ್ರ ನಿಲ್ಲಿಸುವಂತಿರಬೇಕು

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಕಾರ್ಯದರ್ಶಿ ಜಯರಾಂ ರಾಯಪುರ, ಸಾರಿಗೆ ಇಲಾಖೆ ಕಾರ್ಯದರ್ಶಿ ಪ್ರಸಾದ್, ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ:ರಸ್ತೆ ಇಲ್ಲದ ಕುಗ್ರಾಮ: ಸ್ಟ್ರೆಚರ್​​ನಲ್ಲೇ ಮೃತದೇಹ ಹೊತ್ತು ಸಾಗಿಸಿದ ಸಂಬಂಧಿಕರು

For All Latest Updates

TAGGED:

ABOUT THE AUTHOR

...view details