ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಿಬ್ಬಂದಿ ಮುಷ್ಕರ ನಡೆಸಲು ಸಜ್ಜಾಗಿದ್ದಾರೆ. ಏಪ್ರಿಲ್ 07 ರಿಂದ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ (ರಿ) 4 ರಸ್ತೆ ಸಾರಿಗೆ ನಿಗಮಗಳಿಗೆ ಮತ್ತು ಸರ್ಕಾರಕ್ಕೆ ನೋಟಿಸ್ ನೀಡಿದೆ.
ಈ ಹಿನ್ನೆಲೆ ರಾಜ್ಯದಾದ್ಯಂತ ಸಾರ್ವಜನಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಸಾರಿಗೆ ಸೌಲಭ್ಯವನ್ನು ಒದಗಿಸಲು ಕರ್ನಾಟಕ ಸರ್ಕಾರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸಾರಿಗೆ ಇಲಾಖೆ ಮತ್ತು ಸಾರಿಗೆ ನಿಗಮಗಳ ವತಿಯಿಂದ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಂಡು ಸುಗಮ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಸರ್ಕಾರ ದೃಢ ನಿಲುವನ್ನು ತೆಗೆದುಕೊಂಡಿದೆ ಎಂದು ಸಾರಿಗೆ ಇಲಾಖೆ ಆಯುಕ್ತರು ಮಾಹಿತಿ ನೀಡಿದ್ದಾರೆ.