ಬೆಂಗಳೂರು :ಕೋವಿಡ್ ಸಾಂಕ್ರಾಮಿಕ ರೋಗದ 2ನೇ ಅಲೆಯ ತೀವ್ರತೆಯ ಹಿನ್ನೆಲೆ ಸಾರಿಗೆ ನಿಗಮಗಳು ನಷ್ಟದ ಸುಳಿಗೆ ಸಿಲುಕಿವೆ. ತಿಂಗಳ ಸಂಬಳಕ್ಕೂ ಸರ್ಕಾರದ ಅನುದಾನವನ್ನೇ ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಇದೀಗ ಸರ್ಕಾರ ಸಾರಿಗೆ ನೌಕರರ ಸಂಬಳಕ್ಕಾಗಿ 60.82 ಕೋಟಿ ಹಣ ಬಿಡುಗಡೆ ಮಾಡಿದೆ. ನೌಕರರ ಸಂಬಳ ಬಿಡುಗಡೆ ಮಾಡಿ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಆದೇಶಿಸಿದ್ದಾರೆ.