ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ಪ್ರಯಾಣಿಕರು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಾದು ಕುಳಿತಿದ್ದಾರೆ.
ಮೆಜೆಸ್ಟಿಕ್ ನಿಲ್ದಾಣಕ್ಕೆ ಬಾರದ ಬಸ್ಗಳು: ಪ್ರಯಾಣಿಕರ ಪರದಾಟ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಕಾದು ಕುಳಿತ ದೃಶ್ಯ ಕಂಡುಬಂದಿದೆ.
ಮೆಜೆಸ್ಟಿಕ್ ನಿಲ್ದಾಣ
ನಿನ್ನೆ ಬಸ್ ಸಂಚಾರ ಸ್ಥಗಿತಗೊಳಿಸುವಂತೆ ಕೋಡಿಹಳ್ಳಿ ಚಂದ್ರಶೇಖರ್ ಅವರು ಸಾರಿಗೆ ನೌಕರರಿಗೆ ಕರೆ ನೀಡಿರುವ ಹಿನ್ನೆಲೆ ಇಂದು ಬಿಎಂಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಬೆಂಗಳೂರಿನಲ್ಲಿ ಬಿಎಂಟಿಸಿ ಸಂಚಾರ ಅರ್ಧ ಬಂದ್ ಆಗಿದ್ದು, ಡಿಪೋದ ಮುಂಭಾಗ ಬಸ್ಗಳನ್ನು ನಿಲ್ಲಿಸಲಾಗಿದೆ. ಈ ಹಿನ್ನೆಲೆ ಪ್ರಯಾಣಿಕರು ಬಸ್ಸುಗಳಿಗಾಗಿ ಕಾದು ಕುಳಿತಿರುವ ದೃಶ್ಯ ನಗರದಲ್ಲಿ ಕಂಡುಬಂದಿದೆ.