ಬೆಂಗಳೂರು: ಲಾಕ್ಡೌನ್ನಿಂದಾಗಿ ರಾಜ್ಯದಲ್ಲಿ ಸಿಲುಕಿರುವ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ತಲುಪಿಸುವುದು ನಮ್ಮ ಜವಾಬ್ದಾರಿ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಭರವಸೆ ನೀಡಿದೆ.
ವಲಸೆ ಕಾರ್ಮಿಕರ ಪ್ರಯಾಣ ನಮ್ಮ ಜವಾಬ್ದಾರಿ : ಹೈಕೋರ್ಟ್ಗೆ ಸರ್ಕಾರದ ಭರವಸೆ - High Court news
ವಲಸೆ ಕಾರ್ಮಿಕರ ಪ್ರಯಾಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಭರವಸೆ ನೀಡಿದೆ.
![ವಲಸೆ ಕಾರ್ಮಿಕರ ಪ್ರಯಾಣ ನಮ್ಮ ಜವಾಬ್ದಾರಿ : ಹೈಕೋರ್ಟ್ಗೆ ಸರ್ಕಾರದ ಭರವಸೆ high-court](https://etvbharatimages.akamaized.net/etvbharat/prod-images/768-512-7504320-thumbnail-3x2-news.jpg)
ವಲಸೆ ಕಾರ್ಮಿಕರ ಪ್ರಯಾಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಭರವಸೆ ನೀಡಿದೆ. ಸರ್ಕಾರದ ಪರ ವಕೀಲ ವಿಕ್ರಮ್ ಹುಯಿಲ್ಗೋಳ್ ಲಿಖಿತ ಸ್ಪಷ್ಟನೆ ನೀಡಿದ್ದು, ವಲಸೆ ಕಾರ್ಮಿಕರನ್ನು ಅವರ ಊರುಗಳಿಗೆ ಕಳುಹಿಸಿಕೊಡುವ ವಿಚಾರದಲ್ಲಿ ಸರ್ಕಾರ ಸ್ಪಷ್ಟ ನೀತಿಯನ್ನು ಹೊಂದಿದೆ. ಅದಕ್ಕಾಗಿ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಾಯಿಸಿಕೊಳ್ಳಲು ಅವಕಾಶ ನೀಡಿದ್ದು, ಇಲ್ಲಿ ನೋಂದಾಯಿಸಿಕೊಂಡವರನ್ನು ಅವರ ಸ್ವಂತ ಸ್ಥಳಗಳಿಗೆ ಕಳುಹಿಸಿಕೊಡುವ ಎಲ್ಲ ವ್ಯವಸ್ಥೆ ಮಾಡಲಾಗುತ್ತದೆ.
ರಾಜ್ಯದಿಂದ ಹೊರಹೋಗಲು ಇಚ್ಚಿಸುತ್ತಿರುವ ವಲಸೆ ಕಾರ್ಮಿಕರ ಪೈಕಿ ಈಗಾಗಲೇ 7ಲಕ್ಷಕ್ಕೂ ಅಧಿಕ ಮಂದಿಯನ್ನು ರೈಲು, ಬಸ್ಸುಗಳ ಮೂಲಕ ಕಳುಹಿಸಿಕೊಡಲಾಗಿದೆ. ಕಾರ್ಮಿಕರ ನೋಂದಣಿ ಕಾರ್ಯಕ್ಕೆ ಬಿಬಿಎಂಪಿಯ 198 ವಾರ್ಡ್ಗಳಲ್ಲಿ ಮತ್ತು ರಾಜ್ಯದ 176 ತಹಶೀಲ್ದಾರ್ ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ರಾಜ್ಯದಿಂದ ಹೊರಡುವ ಪ್ರತಿ ವಲಸೆ ಕಾರ್ಮಿಕನಿಗೂ ಮಾರ್ಗಮಧ್ಯೆ ಅನುಕೂಲಕ್ಕಾಗಿ ಊಟ, ನೀರು ಹಾಗೂ ಹಣ್ಣುಗಳನ್ನು ನೀಡಲಾಗುತ್ತಿದೆ ಎಂದು ಸರ್ಕಾರದ ಪರ ವಕೀಲರು ಹೈಕೋರ್ಟ್ ಮಾಹಿತಿ ನೀಡಿದ್ದಾರೆ.