ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಸಿನಲ್ಲಿ ಸಂಚರಿಸುವ ಕೆಲವು ಪ್ರಯಾಣಿಕರು ಟಿಕೆಟ್ ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುತ್ತಿದ್ದರು. ಈ ಸಂಬಂಧ ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ನಗರದಾದ್ಯಂತ ತನಿಖಾ ತಂಡಗಳು ಸೆಪ್ಟೆಂಬರ್‌ನಲ್ಲಿ ದಾಳಿ ನಡೆಸಿವೆ.
ಈ ವೇಳೆ ಒಟ್ಟು 15,576 ಟ್ರಿಪ್‌ಗಳನ್ನು ತಪಾಸಣೆ ನಡೆಸಿ 2209 ಟಿಕೆಟ್‌ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು 3,45,660 ರೂ ದಂಡ ವಸೂಲಿ ಮಾಡಲಾಗಿದೆ. ಜೊತೆಗೆ, ಸಂಸ್ಥೆಯ ನಿರ್ವಾಹಕರ ವಿರುದ್ಧ 1455 ಪ್ರಕರಣಗಳನ್ನು ದಾಖಲಿಸಲಾಗಿದೆ.