ಬೆಂಗಳೂರು:ರೈತರನ್ನು ಗೌರವದಿಂದ ಕಾಣಬೇಕು. ಜೊತೆಗೆ ರೈತರ ಅಹವಾಲನ್ನು ಆಲಿಸಬೇಕೆಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಅವರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪೊಲೀಸ್ ಪಡೆಯಿಂದ ರೈತರ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ: ಕೇಂದ್ರದ ಕಿವಿ ಹಿಂಡಿದ ದೊಡ್ಡ ಗೌಡರು - banglore
ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಟ್ವೀಟ್ ಮಾಡಿ ರೈತರನ್ನು ಗೌರವದಿಂದ ಕಾಣಬೇಕು. ಜೊತೆಗೆ ರೈತರ ಅಹವಾಲನ್ನು ಆಲಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ದೇವೇಗೌಡ
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಸರ್ಕಾರದ ಕೃಷಿ ನೀತಿ ವಿರೋಧಿಸಿ ರೈತರು ನಡೆಸುತ್ತಿರುವ ದೆಹಲಿ ಚಲೋ ರ್ಯಾಲಿ ತಡೆಯಲು ಪೊಲೀಸ್ ಪಡೆಯನ್ನು ಬಳಕೆ ಮಾಡಿರುವ ಚಿತ್ರಗಳನ್ನು ಗಮನಿಸಿದ್ದೇನೆ. ಪ್ರತಿಭಟನಾ ರ್ಯಾಲಿ ನಡೆಸುತ್ತಿರುವ ರೈತರಿಗೆ ತೊಂದರೆ ಆಗುತ್ತಿರುವುದನ್ನು ನೋಡಿದ್ದೇನೆ ಎಂದಿದ್ದಾರೆ.
ರೈತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳಬೇಕು. ಅದನ್ನು ಬಿಟ್ಟು ರೈತರ ಮೇಲೆ ದೌರ್ಜನ್ಯ ನಡೆಸುವುದು ಸರಿಯಲ್ಲ. ರೈತರ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.