ಬೆಂಗಳೂರು: ಬೀದಿ ನಾಯಿಯನ್ನು ಥಳಿಸಿ ಆ್ಯಸಿಡ್ ಹಾಕಲು ಯತ್ನಿಸಿದ ಅಮಾನವೀಯ ಘಟನೆ ಬನಶಂಕರಿಯ ಅಂಬೇಡ್ಕರ್ ನಗರದಲ್ಲಿ ನಡೆದಿದ್ದು, ಈ ಸಂಬಂಧ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಾರ್ಚ್ 4 ರ ರಾತ್ರಿ ಸುಮಾರು 10 ಗಂಟೆಗೆ ಕಿಡಿಗೇಡಿಗಳು ಬೀದಿ ನಾಯಿಯೊಂದನ್ನು ಕಟ್ಟಿ ಹಾಕಿದ್ದಾರೆ. ಇದನ್ನು ಪ್ರಶ್ನಿಸಿದ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಾಯಿ ಹಿಂಸಿಸುವುದನ್ನು ತಡೆಯಲು ಹೋದಾಗ ನನಗೆ ಬೆದರಿಕೆ ಹಾಕಿದ್ದಾರೆಂದು ಆರೋಪಿದ ಮಹಿಳೆ, ಸಾಮಾಜಿಕ ಕಾರ್ಯಕರ್ತೆಯೊಬ್ಬರ ಸಹಾಯದಿಂದ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.