ಬೆಂಗಳೂರು:ಕರಾವಳಿ ಭಾಗದಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ತಕ್ಷಣವೇ ಪರಿಹಾರ ಕಾರ್ಯಾಚರಣೆ ಕೈಗೊಳ್ಳುವಂತೆ ಜಿಲ್ಲಾಡಳಿತಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಕರಾವಳಿ ಭಾಗದಲ್ಲಿ ಉಂಟಾಗಿರುವ ಚಂಡಮಾರುತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಸಚಿವರಿಗೆ ಕರೆ ಮಾಡಿ ಪರಿಸ್ಥಿತಿಯ ಮಾಹಿತಿ ಪಡೆದುಕೊಂಡರು. ಕೋವಿಡ್ ನಡುವೆಯು ಹಾನಿಗೆ ಒಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಹಾಗೂ ರಕ್ಷಣಾ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಸೂಚನೆ ನೀಡಿದರು.