ಬೆಂಗಳೂರು: ರಾಜರಾಜೇಶ್ವರಿ ನಗರದ ಕ್ಷೇತ್ರದ ಪರಾಜಿತ ಅಭ್ಯರ್ಥಿ ಹಾಗೂ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತುಳಸಿ ಮುನಿರಾಜುಗೌಡರನ್ನು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲಾಗಿದೆ.
ತುಳಸಿ ಮುನಿರಾಜುಗೌಡ ನಿಗಮಾಧ್ಯಕ್ಷ ಸ್ಥಾನ: ಭವಿಷ್ಯದ ಬಂಡಾಯಕ್ಕೆ ತೆರೆ ಎಳೆದ ಬಿಎಸ್ವೈ! - Rajarajeshwari Nagar by-election
ಸುಪ್ರೀಂ ತೀರ್ಪು ಬಂದ ಕೂಡಲೇ ಕೆಲ ಅನರ್ಹ ಶಾಸಕರಿಗೆ ಬಿಜೆಪಿ ಟಿಕೆಟ್ ಪಕ್ಕ ಆಗಿದೆ. ಆದರೆ ಬಿಜೆಪಿಯಲ್ಲಿ ಭಿನ್ನಮತ ಭುಗಿಲೇಳದಂತೆ ಸಿಎಂ ಬಿಎಸ್ ಯಡಿಯೂರಪ್ಪ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.
ತುಳಸಿ ಮುನಿರಾಜುಗೌಡಗೆ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ
ಸದ್ಯ ಮುನಿರತ್ನ ಅನರ್ಹ ಶಾಸಕರಾಗಿದ್ದು ಡಿ.5 ರ ಚುನಾವಣೆ ಎದುರಿಸುತ್ತಿಲ್ಲ. ಕಾನೂನು ತೊಡಕು ಮುಗಿದ ನಂತರ ಚುನಾವಣೆ ನಡೆಯಲಿದ್ದು ಆಗ ಬಿಜೆಪಿಯಿಂದ ಕಣಕ್ಕಿಳಿಯಲಿದ್ದಾರೆ. ಆ ಸಂದರ್ಭದಲ್ಲಿ ಬಂಡಾಯವೇಳಬಾರದು ಎನ್ನುವ ಕಾರಣಕ್ಕೆ ಈಗಲೇ ಟಿಕೆಟ್ ಆಕಾಂಕ್ಷಿಯಾಗಿದ್ದ ಪರಾಜಿತ ಅಭ್ಯರ್ಥಿ ತುಳಸಿ ಮುನಿರಾಜುಗೌಡಗೆ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಿ ಸಿಎಂ ಬಿಎಸ್ ಯಡಿಯೂರಪ್ಪ ಭವಿಷ್ಯದ ಬಂಡಾಯಕ್ಕೆ ಕಡಿವಾಣ ಹಾಕಿದ್ದಾರೆ ಎನ್ನಲಾಗಿದೆ.