ಬೆಂಗಳೂರು : ವಿಧಾನಪರಿಷತ್ ಉಪಚುನಾವಣೆಗೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ತುಳಸಿ ಮುನಿರಾಜು ಗೌಡ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಧನ್ಯವಾದ ಸಲ್ಲಿಸಿದರು.
ಅಧಿಕೃತ ನಿವಾಸ ಕಾವೇರಿಗೆ ಭೇಟಿ ನೀಡಿದ ತುಳಸಿ ಮುನಿರಾಜುಗೌಡ, ಸಿಎಂ ಬಿಎಸ್ವೈ ಅವರನ್ನು ಭೇಟಿಯಾಗಿ ವಿಧಾನಪರಿಷತ್ ಉಪಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ಅರ್ಪಿಸಿದರು.