ಕರ್ನಾಟಕ

karnataka

ETV Bharat / state

ತುಂಗಭದ್ರಾ ಎಡದಂಡೆ ಕಾಲುವೆ ನೀರಾವರಿ: ರಮೇಶ್ ಜಾರಕಿಹೊಳಿ ರೈತ ಮುಖಂಡರ ಜೊತೆ ಸಭೆ - Ramesh jarakiholi had meeting with farmers

ತುಂಗಭದ್ರಾ ಎಡದಂಡೆ ಕಾಲುವೆ ನೀರಾವರಿ ಕುರಿತು ರೈತ ಮುಖಂಡರ ಹಾಗೂ ಜನಪ್ರತಿನಿಧಿಗಳ ಜೊತೆ ಸಚಿವ ರಮೇಶ್​ ಜಾರಕಿಹೊಳಿ ಸಭೆ ನಡೆಸಿದ್ರು.

ರಮೇಶ್ ಜಾರಕಿಹೊಳಿ ರೈತ ಮುಖಂಡರ ಜೊತೆ ಸಭೆ
ರಮೇಶ್ ಜಾರಕಿಹೊಳಿ ರೈತ ಮುಖಂಡರ ಜೊತೆ ಸಭೆ

By

Published : Sep 11, 2020, 5:41 PM IST

ಬೆಂಗಳೂರು:ತುಂಗಭದ್ರಾ ಎಡದಂಡೆ ಕಾಲುವೆಯ ನೀರಾವರಿ ಕುರಿತು ರೈತ ಮುಖಂಡರು ಮತ್ತು ಜನಪ್ರತಿನಿಧಿಗಳೊಂದಿಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಚರ್ಚೆ ನಡೆಸಿದ್ದಾರೆ.

ರಮೇಶ್ ಜಾರಕಿಹೊಳಿ ರೈತ ಮುಖಂಡರ ಜೊತೆ ಸಭೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಸಭೆಯಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್, ಶಾಸಕ ಬಸವರಾಜ ಧಡೇಸೂಗೂರು, ಮಾಜಿ ಶಾಸಕ ಭೋಸರಾಜ್, ರೈತಸಂಘದ ಅಧ್ಯಕ್ಷ ಚಾಮರಸ ಮಾಲೀ ಪಾಟೀಲ್, ಜಲಸಂಪನ್ಮೂಲ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಾರ್ಯದರ್ಶಿ ಅನಿಲ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ತುಂಗಭದ್ರಾ ಎಡದಂಡೆ ಕಾಲುವೆ ನೀರಾವರಿ ಬಗ್ಗೆ ಹಲವು ರೈತರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ABOUT THE AUTHOR

...view details