ಕರ್ನಾಟಕ

karnataka

ETV Bharat / state

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸದಿದ್ದರೆ ತಿಳುವಳಿಕೆ ಪತ್ರ: ತುಷಾರ್ ಗಿರಿನಾಥ್ - ‘BBMP

ನಗರದಲ್ಲಿ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಬಳಸಬೇಕು. ಬಳಸದೆ ಇರುವವರಿಗೆ ತಿಳುವಳಿಕೆ ಪತ್ರ ನೀಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.

ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

By ETV Bharat Karnataka Team

Published : Jan 4, 2024, 7:30 PM IST

ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಬಳಸಬೇಕು. ಶೇ. 60 ರಷ್ಟು ಕನ್ನಡ ಭಾಷೆಯನ್ನು ಬಳಸದೇ ಇರುವವರಿಗೆ ತಿಳುವಳಿಕೆ ಪತ್ರ ನೀಡಿ ಕೂಡಲೇ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ವಲಯ ಆಯುಕ್ತರಿಗೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ ನೀಡಿದರು.

ನಗರದ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲಾ ವಲಯದ ಉದ್ದಿಮೆಗಳನ್ನು ಜನವರಿ 15ರ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು. ಕನ್ನಡ ಭಾಷೆಯ ನಾಮಫಲಕ ಅಳವಡಿಸುವಂತೆ ತಿಳುವಳಿಕೆ ಪತ್ರ ನೀಡಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಕನ್ನಡ ಭಾಷೆಯನ್ನು ಬಳಸದ ಉದ್ದಿಮೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.

ಸಮೀಕ್ಷೆ ನಡೆಸುವಾಗ ನಾಮಪಲಕದಲ್ಲಿ ಕನ್ನಡ ಬಳಕೆ ಮಾಡದಿದ್ದಲ್ಲಿ ಆಯಾ ಉದ್ದಿಮೆಗಳಿಗೆ ತಿಳುವಳಿಕೆ ಪತ್ರ ನೀಡಬೇಕು. ಉದ್ದಿಮೆ ಪರವಾನಗಿ ಇದ್ದರೆ ಯಾಕೇ ನಾವು ಉದ್ದಿಮೆ ಪರವಾನಗಿ ರದ್ದು ಮಾಡಬಾರದು ಎಂದು ನೀಡಬೇಕು. ಒಂದು ವೇಳೆ ಉದ್ದಿಮೆ ಪರವಾನಗಿ ಮಾಡಿಸದ್ದಿದರೆ ಯಾಕೆ ನಾವು ನಿಮ್ಮ ಉದ್ಯಮವನ್ನು ಮುಚ್ಚಬಾರದೆಂದು ತಿಳುವಳಿಕೆ ಪತ್ರವನ್ನು ಜಾರಿಮಾಡಬೇಕೆಂದು ತುಷಾರ್ ಗಿರಿನಾಥ್ ತಿಳಿಸಿದರು.

ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ನಡೆದ ಸಭೆ

ಸಭೆಯಲ್ಲಿ ವಲಯ ಆಯುಕ್ತ ಇಬ್ರಾಹಿಂ ಮೈಗುರ್, ಪ್ರೀತಿ ಗೆಹ್ಲೋಟ್, ಎಲ್ಲಾ ವಲಯದ ಜಂಟಿ ಆಯುಕ್ತರು, ಉಪ ಆಯುಕ್ತರು (ಆಡಳಿತ), ಜಾಹೀರಾತು ವಿಭಾಗದ ಉಪ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿ, ವಲಯ ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ನಾಮಫಲಕ ಹಾಕದೇ ಇದ್ದಲ್ಲಿ ವ್ಯಾಪಾರ ಪರವಾನಿಗೆ ರದ್ದು :ಮತ್ತೊಂದೆಡೆ ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆ ಸಂಬಂಧ ಹೊಸ ನಿಯಮ ಜಾರಿಗೆ ಬಿಬಿಎಂಪಿ ಮುಂದಾಗಿದ್ದು, ಏಳು ದಿನಗಳಲ್ಲಿ ನಾಮಫಲಕ ಹಾಕಬೇಕೆಂದು ನೋಟಿಸ್ ಜಾರಿಗೊಳಿಸಿದೆ. ವಾಣಿಜ್ಯ ಉದ್ದಿಮೆಗಳಿಗೆ, ಮಳಿಗೆಗಳಿಗೆ ನೋಟಿಸ್ ನೀಡಿ ಏಳು ದಿನದೊಳಗೆ ಕಾನೂನು ರೀತ್ಯಾ ನಾಮಫಲಕ ಹಾಕಬೇಕೆಂದು ಸೂಚಿಸಲಾಗಿದೆ. ಎಂಟು ವಲಯದ ಪಾಲಿಕೆ ಅಧಿಕಾರಿಗಳಿಂದ ನೋಟಿಸ್ ಜಾರಿ ಮಾಡಲಾಗಿದೆ. ಕನ್ನಡ ನಾಮಫಲಕವನ್ನು ಶೇ. 60ರಷ್ಟು ಇರುವಂತೆ ಆಳವಡಿಸಬೇಕೆಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಒಂದು ವೇಳೆ ಏಳು ದಿನದೊಳಗೆ ನಾಮಫಲಕ ಹಾಕದೇ ಇದ್ದಲ್ಲಿ ವ್ಯಾಪಾರ ಪರವಾನಿಗೆ ರದ್ದು ಮಾಡುವ ಎಚ್ಚರಿಕೆಯನ್ನು ಬಿಬಿಎಂಪಿ ನೀಡಿದೆ.

ಇದನ್ನೂ ಓದಿ :ಏಳು ದಿನಗಳಲ್ಲಿ ಕನ್ನಡ ನಾಮಫಲಕ ಅಳವಡಿಸದಿದ್ದರೆ ವ್ಯಾಪಾರ ಪರವಾನಿಗೆ ರದ್ದು: ಬಿಬಿಎಂಪಿ ನೋಟಿಸ್

ABOUT THE AUTHOR

...view details