ಬೆಂಗಳೂರು:ಕೇಂದ್ರ ಸಚಿವ ಡಿ.ವಿ ಸದಾನಂದಗೌಡರ ನಗು ಬಗ್ಗೆ ಲೇವಡಿ ಮಾಡಿ ಟ್ವೀಟ್ ಮಾಡಿದ್ದ ಸಿದ್ದರಾಮಯ್ಯಗೆ ಟ್ವೀಟ್ ಮೂಲಕವೇ ಡಿವಿಎಸ್ ಮತ್ತು ಸುರೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.
ಹೌದು, ನನ್ನದು ನಗು ಮುಖ, ನನ್ನ ಆಲೋಚನೆಗಳು ಯಾವತ್ತೂ ಧನಾತ್ಮಕ ಅದಕ್ಕೆ ನಾನು ನಗು ಮಖದಲ್ಲಿ ಇರುತ್ತೇನೆ. ಗಂಡನನ್ನು ಕಳೆದುಕೊಂಡವರ ಬಗ್ಗೆ ಕೀಳಾಗಿ ಮಾತನಾಡುವ ಋಣಾತ್ಮಕ ಚಿಂತನೆ ನನಗೆ ಯಾವತ್ತೂ ಬಂದಿಲ್ಲ. ಅಧಿಕಾರಕ್ಕೋಸ್ಕರ ಬದುಕಿ ಬಂದ, ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಂಡು ಹೀನವಾಗಿ ಬದುಕುವ ಜಾಯಮಾನ ನನ್ನದಲ್ಲ. ಹೇಳಿಕೊಳ್ಳುವಂತ ನಿಷ್ಕಳಂಕ ಚಾರಿತ್ರ್ಯದ ಒಬ್ಬನೇ ಒಬ್ಬ ನಾಯಕ ನಿಮ್ಮಲ್ಲಿದ್ದಾನೆ ಅನ್ನುವ ಛಾತಿ ನಿಮಗಿದೆಯಾ? ಎಂದು ಟೀಕಾಕಾರರಿಗೆ ಸದಾನಂದಗೌಡ ಟ್ವೀಟೇಟು ನೀಡಿದ್ದಾರೆ.