ಬೆಂಗಳೂರು: ತಮ್ಮನ್ನು ಲೇವಡಿ ಮಾಡಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲರಾಗಿದ್ದಾರೆ.
ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು - ನಳಿನ್ ಕುಮಾರ್ಗೆ ಸಿದ್ದರಾಮಯ್ಯ ತಿರುಗೇಟು
ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ದಲಿತರ ಪರವೋ ಅಥವಾ ಭಯೋತ್ಪಾದಕರ ಪರವೋ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ಕೊಟ್ಟಿದ್ದರು. ಇದಕ್ಕೆ ಟ್ವೀಟ್ ಮೂಲಕ ತಿರುಗೇಟು ನೀಡಿರುವ ಸಿದ್ದರಾಮಯ್ಯ, ನಳಿನ್ ಕುಮಾರ್ ಅವರೇ, ನಾವು ಮನುಷ್ಯರ ಪರ, ಮನುಷ್ಯ ವಿರೋಧಿಗಳ ಪರ ಅಲ್ಲ. ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ. ನಾವು ಕಟ್ಟುವವರ ಪರ, ಕೆಡವುವವರ ಪರ ಅಲ್ಲ. ನಮ್ಮನ್ನು ಮತ್ತು ನಿಮ್ಮನ್ನು ಇದಕ್ಕಿಂತ ಚೆನ್ನಾಗಿ ಹೇಗೆ ಪರಿಚಯಿಸಲಿ ಹೇಳಿ? ಎಂದಿದ್ದಾರೆ.
ಇನ್ನೊಂದು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನಳಿನ್ ಕುಮಾರ್ ಕಟೀಲ್ ಅವರೇ, ನೀವು ದಲಿತರ ಪರವೋ? ಹಿಂದುಗಳ ಪರವೋ? ನೀವೊಬ್ಬ ಹಿಂದುವಾದರೆ, ಅಖಂಡ ಶ್ರೀನಿವಾಸ ಮೂರ್ತಿ ಯಾಕೆ ಹಿಂದೂ ಅಲ್ಲ? ಅವರು ಯಾಕೆ ಹಿಂದು ಆಗದೆ ಕೇವಲ ದಲಿತ ಆಗಿಬಿಟ್ಟರು? ಹಿಂದುತ್ವದ ಸರಿಯಾದ ವ್ಯಾಖ್ಯಾನ ಏನೆಂದು ನಿಮ್ಮ ಹಿರಿಯರಿಂದ ಕೇಳಿ ತಿಳಿದುಕೊಂಡು ಸ್ಪಷ್ಟಪಡಿಸುವಿರಾ ಎಂದು ಪ್ರಶ್ನಿಸಿದ್ದಾರೆ.