ಕರ್ನಾಟಕ

karnataka

ETV Bharat / state

ಆಟೋ, ದ್ವಿಚಕ್ರ ವಾಹನಗಳ ಕಳ್ಳತನ: ಬೆಂಗಳೂರಲ್ಲಿ ಇಬ್ಬರು ಆರೋಪಿಗಳ ಬಂಧನ - ಬೆಂಗಳೂರು ಪೂರ್ವ ವಿಭಾಗದ ಕಾಟನ್‌ಪೇಟೆ

ಇನ್ಸ್​​ಪೆಕ್ಟರ್ ಪ್ರವೀಣ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಮನೆ ಮುಂದೆ, ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ಆಟೋ, ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

two-wheeler, Auto robberies
ಪೊಲೀಸರು ವಶಪಡಿಸಿಕೊಂಡಿರುವ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನಗಳು

By

Published : Feb 5, 2022, 7:31 AM IST

ಬೆಂಗಳೂರು:ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಸ್ಥಳಗಳಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೂರ್ವ ವಿಭಾಗದ ಕಾಟನ್‌ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುಬಾರಕ್ ಪಾಷಾ ಮತ್ತು ಮುಬಾರಕ್ ಖಾನ್ ಬಂಧಿತ ಆರೋಪಿಗಳು. ಜ. 18 ರಂದು ರಾತ್ರಿ 11 ಗಂಟೆಯ ಸುಮಾರಿಗೆ ಬಜಾಜ್ ಆಟೋ ರಿಕ್ಷಾ ವಾಹನವನ್ನು ದೂರುದಾರರು ಮನೆಯ ಮುಂದೆ ಬೀಗ ಹಾಕಿ ನಿಲ್ಲಿಸಿದ್ದು, ಬೆಳಗಾಗುವಷ್ಟರಲ್ಲಿ ಕಳ್ಳತನವಾಗಿತ್ತು. ಈ ಕುರಿತು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:Srinagar Encounter: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಇನ್ಸ್​​ಪೆಕ್ಟರ್ ಪ್ರವೀಣ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದಾಗ ಕಾಟನ್‌ಪೇಟೆ ಹಾಗೂ ವಿವಿ ಪುರಂ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ಆಟೋ ರಿಕ್ಷಾ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದಾಗಿ ಬಾಯ್ಬಿಟ್ಟಿದ್ದಾರೆ ಎನ್ನಲಾಗ್ತಿದೆ. ಸದ್ಯ ಬಂಧಿತರಿಂದ 1.42 ಲಕ್ಷ ರೂ.ಮೌಲ್ಯದ ಆಟೋ ರಿಕ್ಷಾ ಮತ್ತು 3 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ಪೊಲೀಸ್ ದಾಳಿ: ನಗರದಲ್ಲಿ ಅಕ್ರಮವಾಗಿ ಗ್ಯಾಸ್ ಸಿಲಿಂಡರ್​​ಗಳನ್ನು ಸಣ್ಣ ಸಣ್ಣ ಸಿಲಿಂಡರ್‌ಗಳಿಗೆ ರೀಫಿಲ್ಲಿಂಗ್ ಮಾಡಿ ವಾಣಿಜ್ಯ ಬಳಕೆಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಅನ್ನಪೂರ್ಣೆಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆಯ ಮೇಲೆ ಪೊಲೀಸ್ ದಾಳಿ:ಸಿಲಿಂಡರ್​​ಗಳು ವಶಕ್ಕೆ

ಗುರುವಾರ ಸಂಜೆ 5.30ರ ಸುಮಾರಿನಲ್ಲಿ ಹೊಯ್ಸಳ ಪೊಲೀಸರು ಗಸ್ತಿನಲ್ಲಿದ್ದಾಗ ಅಕ್ರಮವಾಗಿ ಗೃಹ ಬಳಕೆಗೆ ಬಳಸುತ್ತಿದ್ದ ಎಲ್​​ಪಿಜಿ ಸಿಲಿಂಡರ್‌ ಗಳನ್ನು ದಾಸ್ತಾನು ಮಾಡಿಕೊಂಡಿರುವುದು ಗಮನಿಸಿ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಗೆ ತಿಳಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ಸ್‌ಪೆಕ್ಟರ್ ಲೋಹಿತ್ ಹಾಗೂ ಸಿಬ್ಬಂದಿ ಅಕ್ರಮ ರೀಫಿಲ್ಲಿಂಗ್ ಸ್ಥಳದ ಮೇಲೆ ದಾಳಿ ಮಾಡಿ ಆರೋಪಿಯನ್ನು ಬಂಧಿಸಿ, ರೀಫಿಲ್ಲಿಂಗ್ ಬಳಸುತ್ತಿದ್ದ 20 ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ABOUT THE AUTHOR

...view details