ಕರ್ನಾಟಕ

karnataka

ETV Bharat / state

ಪಾದರಾಯನಪುರದಲ್ಲಿ ಮತ್ತೆ ಎರಡು ಕೊರೊನಾ ಪ್ರಕರಣ ಪತ್ತೆ - Two Corona virus confirmed in padarayanapur

ಬೆಂಗಳೂರಿನ ಪಾದರಾಯನಪುರದ ಪ್ರತ್ಯೇಕ ಮನೆಗಳಲ್ಲಿ ಎರಡು ಕೊರೊನಾ ಸೋಂಕು ದೃಢಪಟ್ಟಿದೆ. ಮಹಿಳೆ ಹಾಗೂ ಯುವಕನಿಗೆ ಸೋಂಕು ತಗುಲಿದ್ದು, ಪಾದರಾಯನಪುರದ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

Two Corona virus confirmed in padarayanapur
ಪಾದರಾಯನಪುರದಲ್ಲಿ ಎರಡು ಕೊರೊನಾ ಪಾಸಿಟಿವ್ ಪತ್ತೆ

By

Published : May 7, 2020, 11:43 PM IST

ಬೆಂಗಳೂರು:ಪಾದರಾಯನಪುರದ 10ನೇ ಕ್ರಾಸ್ ರಸ್ತೆಯ ಪ್ರತ್ಯೇಕ ನಿವಾಸಗಳಲ್ಲಿ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಪಾದರಾಯನಪುರದಲ್ಲಿ ಎರಡು ಕೊರೊನಾ ಪಾಸಿಟಿವ್ ಪತ್ತೆ

ನಿನ್ನೆ(ಮೇ 6) 48 ಜನರ ಪರೀಕ್ಷೆ ನಡೆಸಿದ್ದು, ಇಬ್ಬರಲ್ಲಿ ಕೊರೊನಾ ಸೋಂಕು ಕಂಡು ಬಂದಿದೆ. 35 ವರ್ಷದ ಮಹಿಳೆ ಹಾಗೂ 25 ವರ್ಷದ ಯುವಕನಲ್ಲಿ ಕೊರೊನಾ ದೃಢಪಟ್ಟಿದೆ.

ಈಗಾಗಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊರೊನಾ ಸೋಂಕಿತರು ಈ ಸ್ಥಳದಲ್ಲಿ ಸಂಚರಿಸಿದ್ದರಿಂದ ಸೋಂಕು ತಗುಲಿರಬಹುದು ಎಂದು ಪಾಲಿಕೆ ಆರೋಗ್ಯ ಅಧಿಕಾರಿಗಳು ಅಂದಾಜಿಸಿದ್ದಾರೆ.

ಈ ಮೂಲಕ ಪಾದರಾಯನಪುರದ ಕೊರೊನಾ ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. 280ಕ್ಕೂ ಹೆಚ್ಚು ಜನರನ್ನು ಈಗಾಗಲೇ ಹೋಟೆಲ್​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಇಂದು 26 ಜನರ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪಾಲಿಕೆ ಆರೋಗ್ಯಾಧಿಕಾರಿ ಮನೋರಂಜನ್ ಹೆಗಡೆ ಮಾಹಿತಿ ನೀಡಿದರು.

ABOUT THE AUTHOR

...view details