ಕರ್ನಾಟಕ

karnataka

ETV Bharat / state

ಮುಂದಿನ ವಾರದಲ್ಲಿ ಮತ್ತೆ ವಾಯುಭಾರ ಕುಸಿತ: ರಾಜ್ಯದಲ್ಲಿ ಎರಡು ದಿನ ಮಳೆ ಆರ್ಭಟ - ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗ

ಕರಾವಳಿ ಜಿಲ್ಲೆಗಳಲ್ಲಿ ಅ.20, 21 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿಯೂ ಈ ಎರಡು ದಿನ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ತಿಳಿಸಿದೆ.

rain
ಮಳೆ

By

Published : Oct 17, 2020, 4:57 PM IST

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಿದೆ. ಮಾನ್ಸೂನ್ ರಾಜ್ಯದಲ್ಲಿ ದುರ್ಬಲವಾಗಿದೆ ಎಂದು ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗದ ನಿರ್ದೇಶಕರಾದ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ವಾಯುಭಾರ ಕುಸಿತದ ಪ್ರಭಾವ ಬಂಗಾಳ ಉಪ ಸಾಗರದ ಆಂಧ್ರಪ್ರದೇಶದ ಕರಾವಳಿ ಬಳಿ ಇದೆ. ಬಂಗಾಳ ಕೊಲ್ಲಿಯಲ್ಲಿ ಮತ್ತೆ ಅ. 19 ರಂದು ವಾಯುಭಾರ ಕುಸಿತವಾಗಲಿದೆ. ಇದರ ಪ್ರಭಾವದಿಂದ ಉತ್ತರ ಒಳನಾಡಿನ ಅ16,17 ಕೆಲವು ಕಡೆ ಮಾತ್ರ ಮಳೆಯಾಗಬಹುದು. ಅ.19ಕ್ಕೆ ಹಲವು ಕಡೆ ಮಳೆ ಆಗಲಿದೆ. ಹಾಗೂ ಅ.20,21ಕ್ಕೆ ಮಳೆಯ ಪ್ರಮಾಣ ಏರಿಕೆಯಾಗಲಿದ್ದು ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಹವಾಮಾನ ಇಲಾಖೆಯ ಪ್ರಾದೇಶಿಕ ವಿಭಾಗ ನಿರ್ದೇಶಕ ಸಿ.ಎಸ್ ಪಾಟೀಲ್

ಬೆಳಗಾವಿ, ಕಲ್ಬುರ್ಗಿ, ಯಾದಗಿರಿ, ಬೀದರ್, ವಿಜಯಪುರ, ರಾಯಚೂರು, ಬಾಗಲಕೋಟೆ, ಕೊಪ್ಪಳದಲ್ಲಿ, ಜಿಲ್ಲೆಗಳಲ್ಲಿ ಅ 20, 21 ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇದ್ದು ಎಲ್ಲೋ ಅಲರ್ಟ್ ನೀಡಲಾಗಿದೆ ಎಂದರು.

ಕರಾವಳಿ ಜಿಲ್ಲೆಗಳಲ್ಲಿ ಅ.20, 21 ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿಯೂ ಈ ಎರಡು ದಿನ ಬಹುತೇಕ ಎಲ್ಲಾ ಕಡೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಅ.16,17 ರಂದು ಕೆಲವು ಕಡೆ ಹಗುರ ಮಳೆಯಾಗಲಿದೆ ಎಂದು ಸಿ.ಎಸ್ ಪಾಟೀಲ್ ತಿಳಿಸಿದರು.

ABOUT THE AUTHOR

...view details